Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್.ಡಿ.ಕುಮಾರಸ್ವಾಮಿ- ಬಿಹಾರ ಸಿಎಂ...

ಹೆಚ್.ಡಿ.ಕುಮಾರಸ್ವಾಮಿ- ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ

ಕರ್ನಾಟಕ, ಬಿಹಾರ ಸೇರಿ ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ5 Sept 2022 10:17 PM IST
share
ಹೆಚ್.ಡಿ.ಕುಮಾರಸ್ವಾಮಿ- ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಸಂಜೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಜನತಾ ಪರಿವಾರ ಒಗ್ಗೂಡುವ ಬಗ್ಗೆ  ಮಾತುಕತೆ ನಡೆಯಿತು. ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜಯಪ್ರಕಾಶ ನಾರಾಯಣ್ ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿಪಕ್ಷದ ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಇತ್ತೀಚಿಗೆ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಅದರಲ್ಲೂ ಪ್ರಮುಖವಾಗಿ ಬಿಹಾರದಲ್ಲಿ ಆದಂತಹ ಒಂದು ರಾಜಕೀಯದ ಒಂದು ಹೊಸ ಬೆಳವಣಿಗೆ ಎಲ್ಲರ ಗಮನ ಸೆಳೆದಿದೆ. ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆಗಳು ನಡೆದಿವೆ. ನಿತೀಶ್‌ ಕುಮಾರ್‌ ಅವರು ಕೆಲ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪ್ರಾಥಮಿಕ ಹಂತದ ಚರ್ಚೆಗಳಾಗಿವೆ ಎಂದರು ಮಾಜಿ ಮುಖ್ಯಮಂತ್ರಿಗಳು.

ತಮ್ಮ ಭೇಟಿಗೂ ಮೊದಲು ನಿತೀಶ್ ಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ, "ಮುಂದಿನ ದಿನಗಳಲ್ಲಿ ದೇಶದ ಹಿತದೃಷ್ಟಿಯಿಂದ ಏನೇನು ಬೆಳವಣಿಗೆ ಆಗಬೇಕು. ಆ ಬೆಳವಣಿಗೆಗಳು ಯಾವ ರೀತಿ ಆಗುತ್ತವೆ ಕಾದುನೋಡಿ" ಎಂದು ಅವರು ಮಾರ್ಮಿಕವಾಗಿ ಉತ್ತರಿಸಿದರು.

2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದಾಗ ಸುಮಾರು 23 ರಾಜ್ಯಗಳ ಪ್ರಮುಖ ನಾಯಕರುಗಳು ಸೇರಿ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಆ ಪ್ರಮಾಣದ ಸಮಾರಂಭದಲ್ಲಿ ಸೇರಿದ್ದ ಅವತ್ತಿನ ಸನ್ನಿವೇಶ, ಒಂದು ಪರ್ಯಾಯ ಶಕ್ತಿಯಾಗಿ ಒಟ್ಟುಗೂಡಿಸಬೇಕೆಂದು ಆಸೆ ಇತ್ತು. ಆದರೆ, ಅದಕ್ಕೆ ಹಿನ್ನಡೆ ಆಯಿತು. ಈಗ ಬಿಹಾರದಲ್ಲಿ ಆಗಿರುವ ಬೆಳವಣಿಗೆಯಿಂದ ಯಾವ ರೀತಿ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡೊಣ ಎಂದರು ಕುಮಾರಸ್ವಾಮಿ.

ಸಭೆಯಲ್ಲಿ ರಾಜ್ಯದ ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯದ ಜೆಡಿಯು ಅಧ್ಯಕ್ಷ ಮಹಿಮಾ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X