ಬೇಲೂರು: ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತ್ನಿಯನ್ನು ಹತ್ಯೆಗೈದ ಪತಿ

ಬೇಲೂರು: ಕಾಫಿ ತೋಟಕ್ಕೆ ಕೆಲಸಕ್ಕೆಂದು ಹೋಗುತ್ತಿದ್ದ ಪತ್ನಿಯನ್ನು ಆಕೆಯ ಪತಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂದ್ರಮ್ಮ (48) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ಚಂದ್ರಯ್ಯ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಇಂದ್ರಮ್ಮ ಬೆಳಗ್ಗೆ ನಾಲ್ಕು ಮಂದಿ ಸಹ ಕಾರ್ಮಿಕರ ಜೋತೆ ಕೇಶವ ಮೂರ್ತಿ ಎಂಬವರ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಚಂದ್ರಯ್ಯ ಏಕಾಏಕಿಯಾಗಿ ಹಿಂದಿನಿಂದ ಬಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇಂದ್ರಮ್ಮನನ್ನು ಕಾಪಾಡಲು ಬಂದ ಮಹಿಳೆಯ ಮೇಲೂ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕೊಪ್ಪಳ: ಇಬ್ಬರು ಪೊಲೀಸರು ನೀರುಪಾಲು
Next Story