Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರೆಲ್ಲ ಮುಳುಗಿಲ್ಲ, ಮಳೆ ಯಾವ...

ಬೆಂಗಳೂರೆಲ್ಲ ಮುಳುಗಿಲ್ಲ, ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Sept 2022 7:13 PM IST
share
ಬೆಂಗಳೂರೆಲ್ಲ ಮುಳುಗಿಲ್ಲ, ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ: ಸಿಎಂ ಬೊಮ್ಮಾಯಿ

ಮೈಸೂರು,ಸೆ.6:  'ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ  ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ ಎಂದು ಮುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಮೈಸೂರಿಗೆ ಮಂಗಳವಾರ ಆಗಮಿಸಿದ ಅವರು ಮಾಧ್ಯಮದವರೊಮದಿಗೆ ಮಾತನಾಡಿದರು.

'ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ.ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಜಲಪ್ರವಾಹದ ವಿರುದ್ದ ನಾವು ಸಮರ ಸಾರಿದ್ದೇವೆ. ಈ ಸವಾಲನ್ನು ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ಈ ವಿಷಯದಲ್ಲಿ ರಾಜಕೀಯ ಮಾಡುವುದು ಸಣ್ಣ ಪ್ರವೃತ್ತಿಯಾಗಿದೆ' ಎಂದು ತಿಳಿಸಿದರು.

'ಬೆಂಗಳೂರಿನಲ್ಲಿ  8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ.  ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, ಅವುಗಳೆಲ್ಲವೂ ತುಂಬಿ, ನಿರಂತರವಾಗಿ ಮಳೆಯಾಗಿ ನೀರು ಹರಿಯುತ್ತಿದೆ. ಅನಿರೀಕ್ಷಿತ ಮಳೆಯಾಗಿದ್ದು, ಯಾವ ಚರಂಡಿಯನ್ನೂ ಈ ರೀತಿಯ ಮಳೆಗೆ ವಿನ್ಯಾಸಗೊಳಿಸಿರಲಿಲ್ಲ. ಮಹದೇವಪುರದಲ್ಲಿ ಒತ್ತುವರಿಯಾಗಿದೆ' ಎಂದರು.

'ಬೆಂಗಳೂರಿನಲ್ಲಿ 164 ಕೆರೆಗಳೂ ತುಂಬಿದೆ. ಅನಿರೀಕ್ಷಿತ ಮಳೆಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯಾಗಿದೆ. ರಾಜಕಾಲುವೆಗಳನ್ನು, ಚರಂಡಿಗಳನ್ನು ಮುಚ್ಚಲಾಗಿದೆ. ಆದ್ದರಿಂದ ನೀರು ಬಡಾವಣೆಗಳು , ಐಟಿಪಾರ್ಕ್ ಗಳ ಮುಂದೆ ಬಂದು ನಿಂತಿದೆ. ನಮ್ಮ ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ನೀರು ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದ್ದು, ಸವಾಲಿನ ಕೆಲಸವಾಗಿದೆ. ಮೋಟರ್ ಬಳಸಿ ನೀರು ಖಾಲಿ ಮಾಡಿಸಬೇಕಾದರೂ, ನೀರು ಹೋಗಲು ಜಾಗವಿಲ್ಲ. ವರ್ತೂರು ಕೆರೆ ಮತ್ತು ಬೆಳ್ಳಂದೂರು ಕೆರೆ ಅವುಗಳಲ್ಲಿ ಈಗಾಗಲೇ ನೀರು ತುಂಬಿ ಹರಿಯುತ್ತಿರುವುದರಿಂದ, ಹೆಚ್ಚಿನ ನೀರು ಹೋಗಲು ಸಾಧ್ಯವಾಗುತ್ತಿಲ್ಲ. ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದ್ದು, ವರ್ತೂರು ಮತ್ತು ಬೆಳಂದೂರು ಕೆರೆಗಳಲ್ಲಿ ನೀರಿನ ಹರಿವನ್ನು ನಿಯಂತ್ರಿಸಲಾಗುತ್ತಿದೆ. ನಾಳೆ ಸಂಜೆಯೊಳಗೆ ಈ ಕಾರ್ಯವನ್ನು ಸಂಪೂರ್ಣ ಮುಗಿಸಲಾಗುತ್ತದೆ. ನಾನೇ ಖುದ್ದು ಪರಿಶೀಲನೆ ಮಾಡುತ್ತಿದ್ದೇನೆ. ಯಾರೇ ಒತ್ತುವರಿ ಮಾಡಿದ್ದರೂ ಕೂಡ, ಅದನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವ ಸೂಚನೆ ನೀಡಲಾಗಿದ್ದು, ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ' ಎಂದರು.

'ಎರಡು ಎಸ್ ಡಿ ಆರ್ ಎಫ್ ತಂಡವನ್ನು ನಿಯೋಜಿಸಲಾಗಿದೆ. ಬಿಬಿಎಂಪಿ. ಜಲಮಂಡಳಿ, ಬಿಡಿಎ ಸಿಬ್ಬಂದಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಾಳೆ ಸಂಜೆಯೊಳಗೆ ಈ ಕೆಲಸವನ್ನು ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಮಳೆ ನಿರ್ವಹಣೆ ಹಾಗೂ ಮೂಲಸೌಲಭ್ಯಗಳ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ' ಎಂದು ತಿಳಿಸಿದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X