Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಗಳ...

ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಗಳ ನೀರಿನಮಟ್ಟ ದಿಢೀರ್ ಏರಿಕೆ; ಜನರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ6 Sept 2022 10:38 PM IST
share
ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಗಳ ನೀರಿನಮಟ್ಟ ದಿಢೀರ್ ಏರಿಕೆ; ಜನರಲ್ಲಿ ಆತಂಕ

ಬೆಳ್ತಂಗಡಿ;  ನದಿಗಳು ಹರಿಯುವ ಪರಿಸರದಲ್ಲಿ ಹೆಚ್ಚಿನ ಮಳೆ ಇಲ್ಲದಿದ್ದರೂ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರು ದಿಢೀರ್ ಏರಿಕೆಯಾದ ವಿದ್ಯಮಾನ ಮಂಗಳವಾರ ಸಂಜೆ ನಡೆದಿದೆ. ಇದರಿಂದ ನದಿಬದಿಗಳಲ್ಲಿ ವಾಸಿಸುವ ಜನರಲ್ಲಿ ಆತಂಕ ಸೃಷ್ಟಿಯಾಯಿತು.

ದಿಡುಪೆ, ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ಮುಂಡಾಜೆ,ಕಲ್ಮಂಜ ಮೊದಲಾದ ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ಸಂಜೆ 4 ಗಂಟೆ ಬಳಿಕ ನದಿಗಳ ನೀರಿನಲ್ಲಿ ವಿಪರೀತ ಏರಿಕೆ ಕಂಡು ಬಂತು. 

ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ನದಿಯಲ್ಲಿ ಅತ್ಯಧಿಕ ನೀರು ಹರಿದು ಬಂದಿದೆ. ಮೃತ್ಯುಂಜಯ ನದಿಯ ಉಗಮ ಸ್ಥಳವಾದ ಬಿದಿರುತಳ, ಚಾರ್ಮಾಡಿ ಮತ್ತು ಘಾಟಿ ಪ್ರದೇಶದಲ್ಲಿ ಸಂಜೆ 3 ಗಂಟೆ ಬಳಿಕ ಸುಮಾರು ಮೂರು ತಾಸು ಕಾಲ ನಿರಂತರ ಸುರಿದ ವಿಪರೀತ ಮಳೆ ಇದಕ್ಕೆ ಕಾರಣವಾಯಿತು ಎನ್ನಲಾಗಿದೆ. ನದಿ ಬದಿ ಇರುವ ಅಡಕೆ ತೋಟ, ಗದ್ದೆ, ಕಿರು ಸೇತುವೆ, ಕಿಂಡಿ ಅಣೆಕಟ್ಟುಗಳು ಸಂಪೂರ್ಣವಾಗಿ  ಜಲಾವೃತವಾಗಿದ್ದು ವ್ಯಾಪಕವಾಗಿ ಕೃಷಿಗೆ ಹಾನಿ ಸಂಭವಿಸಿದೆ.

ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಯ ಸಂಪರ್ಕ ಹಳ್ಳಗಳಾದ ಕುಕ್ಕಾವಿನ ಏಳೂವರೆ ಹಳ್ಳ ಹಾಗೂ ಕೂಡಬೆಟ್ಟು ಹಳ್ಳಗಳು ಏಕಾ ಏಕಿ ಉಕ್ಕಿಹರಿದ ಪರಿಣಾಮ ನೇತ್ರಾವತಿ ನದಿಯ ತಗ್ಗು ಪ್ರದೇಶಗಳಾದ ಕಡಿರುದ್ಯಾವರ, ಕಾನರ್ಪ, ಪರಮುಖ, ನಿಡಿಗಲ್, ಕಾಯರ್ತೋಡಿ ಕುಡೆಂಚಿ ಹಾಗೂ ಮೃತ್ಯುಂಜಯ ಮತ್ತು ನೇತ್ರಾವತಿ ಸಂಗಮ ಸ್ಥಳವಾದ ಪಜಿರಡ್ಕ ಹಾಗೂ ಕೆಳಭಾಗದ ಪರಿಸರಗಳಲ್ಲಿ ನದಿ ನೀರು ಏರಿಕೆ ಕಂಡಿತು. ಈ ಪ್ರದೇಶಗಳ ಅನೇಕರ ಅಡಕೆ ತೋಟಗಳಿಗೆ ನೀರು ನುಗ್ಗಿದೆ. ದಿಡುಪೆ, ಕೊಲ್ಲಿ ಭಾಗದಲ್ಲಿ ನದಿ ಶಾಂತವಾಗಿದ್ದ ಕಾರಣದಿಂದ ಭಾರಿ ಪ್ರವಾಹದ ಸ್ಥಿತಿ ಉಂಟಾಗಿಲ್ಲ. ಏಳೂವರೆ ಹಳ್ಳ ಹಾಗೂ ಕೂಡ ಬಟ್ಟು ಹಳ್ಳಗಳಿಗೆ ಚಾರ್ಮಾಡಿ ಭಾಗದ ಸಂಪರ್ಕ ಇರುವ ಕಾರಣ ನೀರು ಏರಿಕೆಯಾಗಿದೆ. ಸಂಜೆ 7:30ರ ಬಳಿಕ ಎರಡು ನದಿಗಳ ನೀರು ಇಳಿಯ ತೊಡಗಿದುದರಿಂದ ಪರಿಸರದ ಜನರಲ್ಲಿ ಉಂಟಾಗಿದ್ದ ಆತಂಕ ದೂರವಾಯಿತು.

ಕೊಚ್ಚಿ ಹೋದ ಮರಮಟ್ಟು

ಎರಡು ನದಿಗಳಲ್ಲಿ ಹಸಿಮರಗಳ ಸಹಿತ ಭಾರಿ ಸಂಖ್ಯೆಯ ಮರಮಟ್ಟು ಕೊಚ್ಚಿಕೊಂಡು ಹೋಗಿದೆ. ಭಾರಿ ಮಣ್ಣು ಮಿಶ್ರಿತ ನೀರು ಕೂಡ ಹರಿದಿದ್ದು ಬಂದಿದ್ದು ಘಟ್ಟ ಪ್ರದೇಶದಲ್ಲಿ ಗುಡ್ಡ ಕುಸಿತವೇನಾದರೂ ಉಂಟಾಗಿರಬಹುದೇ ಎಂಬ ಸಂಶಯ ಸ್ಥಳೀಯರಲ್ಲಿ ಉಂಟಾಗಿದೆ. 2019 ರಲ್ಲಿನ ಪ್ರಚಾಹವನ್ನು ನೆನಪಿಸುವ ರೀತಿಯಲ್ಲಿ ಮೃತ್ಯುಂಜಯ ನದಿ ಹರಿದಿದೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಅಡಕೆ ತೋಟಗಳಿಗೆ ನೀರಿನ ಜತೆ ಮರಮಟ್ಟಗಳು ನುಗ್ಗಿದ್ದು ಹಾನಿ ಪ್ರಮಾಣ ಇನ್ನಷ್ಟೇ ತಿಳಿದು ಬರಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X