Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಗರಣಗಳಲ್ಲೇ ಮುಳುಗಿರುವ ರಾಜ್ಯ ಬಿಜೆಪಿ...

ಹಗರಣಗಳಲ್ಲೇ ಮುಳುಗಿರುವ ರಾಜ್ಯ ಬಿಜೆಪಿ ಸರಕಾರ: ಪ್ರಿಯಾಂಕ್ ಖರ್ಗೆ ಆರೋಪ

ವಾರ್ತಾಭಾರತಿವಾರ್ತಾಭಾರತಿ6 Sept 2022 10:50 PM IST
share
ಹಗರಣಗಳಲ್ಲೇ ಮುಳುಗಿರುವ ರಾಜ್ಯ ಬಿಜೆಪಿ ಸರಕಾರ: ಪ್ರಿಯಾಂಕ್ ಖರ್ಗೆ ಆರೋಪ

ಮಂಗಳೂರು, ಸೆ.6: ರಾಜ್ಯ ಬಿಜೆಪಿ ಸರಕಾರವು ಜನರಿಗೆ ನೀಡಿರುವ ಭರವಸೆಗಳನ್ನು ಮೂಲೆಗೆ ತಳ್ಳಿ ಬರೇ ಹಗರಣಗಳಲ್ಲೇ ಮುಳುಗಿದ್ದು, ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.‌

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಗರಣಗಳೇ ಹೆಚ್ಚುತ್ತಿದ್ದು, ಬೆಲೆಏರಿಕೆ, ನಿರುದ್ಯೋಗ ಸಮಸ್ಯೆ, ಕೋಮು ಸಂಘರ್ಷ, ಆರ್ಥಿಕ ಕುಸಿತಗಳಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಕಾಂಗ್ರೆಸ್ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಬಯಸಿದ್ದಾರೆ ಎಂದ ಪ್ರಿಯಾಂಕ ಖರ್ಗೆ ಅವರು ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರ ‘ಭಾರತ್ ಜೋಡೊ’ ಕಾರ್ಯಕ್ರಮವು ದೇಶದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡಲಿದೆ ಎಂದರು.

ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಜಿ ಜಾನ್ ಮಾತನಾಡಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ 3570 ಕೀ.ಮೀ ಭಾರತ್ ಜೋಡೊ ಪಾದಯಾತ್ರೆ ಆಯೋಜಿಸಲಾಗಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನಿಡಿದರು.
‌

ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ಮಧು ಬಂಗಾರಪ್ಪ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಐವನ್ ಡಿಸೋಜ, ಮೊಯ್ದಿನ್ ಬಾವ, ಜೆ.ಆರ್.ಲೋಬೊ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯು.ಎಚ್. ಖಾಲಿದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೀರಜ್ ಚಂದ್ರಪಾಲ್  ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X