Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಹಕಾರಿ ನೀತಿಯ ಕರಡು ರಚನೆಗೆ ಅಮಿತ್...

ಸಹಕಾರಿ ನೀತಿಯ ಕರಡು ರಚನೆಗೆ ಅಮಿತ್ ಶಾರಿಂದ 47 ಸದಸ್ಯರ ಸಮಿತಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ6 Sept 2022 11:46 PM IST
share
ಸಹಕಾರಿ ನೀತಿಯ ಕರಡು ರಚನೆಗೆ ಅಮಿತ್ ಶಾರಿಂದ 47 ಸದಸ್ಯರ ಸಮಿತಿ ಘೋಷಣೆ

ಹೊಸದಿಲ್ಲಿ, ಸೆ. 6: ರಾಷ್ಟ್ರೀಯ ಸಹಕಾರಿ ನೀತಿಯ ಕರಡು ರಚಿಸಲು ರಾಷ್ಟ್ರ ಮಟ್ಟದ ಸಮಿತಿಯೊಂದನ್ನು ರೂಪಿಸುವುದಾಗಿ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಮಂಗಳವಾರ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ‘ಸಹಕಾರ್ ಸೆ ಸಮೃದ್ಧಿ’ಯ ದೃಷ್ಟಿಕೋನವನ್ನು ಸಾಕಾರಗೊಳಿಸಲು ನೂತನ ರಾಷ್ಟ್ರೀಯ ಸಹಕಾರಿ ನೀತಿಯನ್ನು ರೂಪಿಸಲಾಗುತ್ತಿದೆ.

ಕೇಂದ್ರ ಸಂಪುಟದ ಮಾಜಿ ಸಚಿವ ಸುರೇಶ್ ಪ್ರಭಾಕರ್ ಪ್ರಭು ಅಧ್ಯಕ್ಷತೆಯ ರಾಷ್ಟ್ರೀಯ ಮಟ್ಟದ ಸಮಿತಿ ದೇಶದ ಎಲ್ಲ ಭಾಗಗಳ 47 ಸದಸ್ಯರನ್ನು ಒಳಗೊಂಡಿದೆ. ಈ ಸಮಿತಿ ಸಹಕಾರಿ ಕ್ಷೇತ್ರದ ತಜ್ಞರು; ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ಪ್ರಾಥಮಿಕ ಸಹಕಾರಿ ಸಂಘಗಳ ಪ್ರತಿನಿಧಿಗಳು; ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಹಕಾರಿ ಸಂಘಗಳ ಕಾರ್ಯದರ್ಶಿಗಳು ಹಾಗೂ ರಿಜಿಸ್ಟ್ರಾರ್‌ಗಳು ಹಾಗೂ ಕೇಂದ್ರ ಸಚಿವಾಲಯ ಹಾಗೂ ಇಲಾಖೆಯ ಅಧಿಕಾರಿಗಳನ್ನು ಒಳಗೊಳ್ಳಲಿದೆ. 

ಪ್ರಾಥಮಿಕ ಕೃಷಿ ಸಾಲ ಸಂಘ (ಪಿಎಸಿಎಸ್)ಗಳ ಉನ್ನತಿಗೆ ಅನುಪಮವಾದ ನಿಲುವನ್ನು ಹೊಂದಿರುವ ರಾಷ್ಟ್ರೀಯ ಸಹಕಾರ ನೀತಿಯನ್ನು ಶೀಘ್ರದಲ್ಲಿ ಸಿದ್ಧಪಡಿಸಲಾಗುವುದು ಎಂದು ಅಮಿತ್ ಶಾ ಅವರು ಇತ್ತೀಚೆಗೆ ಹೇಳಿದ್ದರು.

ಸಹಕಾರಿ ಸಂಸ್ಥೆಗಳ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಹಾಗೂ ಅವುಗಳಿಗೆ ಅಗತ್ಯ ಬೆಂಬಲ, ಉತ್ತೇಜನ ಮತ್ತು ಸಹಾಯವನ್ನು ಒದಗಿಸುವ ಉದ್ದೇಶದೊಂದಿಗೆ 2002ರಲ್ಲಿ ಸಹಕಾರಿ ಸಂಸ್ಥೆಗಳ ಕುರಿತು ಈಗ ಅಸ್ತಿತ್ವದಲ್ಲಿರುವ ರಾಷ್ಟ್ರೀಯ ನೀತಿ ರೂಪಿಸಲಾಗಿತ್ತು. ಇದರಿಂದ ಸಹಕಾರಿ ಸಂಸ್ಥೆಗಳು ಸ್ವಾಯತ್ತ, ಸ್ವಾವಲಂಬಿ ಹಾಗೂ ಪ್ರಜಾಸತ್ತಾತ್ಮಕ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೆ, ತಮ್ಮ ಸದಸ್ಯರಿಗೆ ಉತ್ತರದಾಯಿಯಾಗಿದೆ ಹಾಗೂ ರಾಷ್ಟ್ರೀಯ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತದೆ.

‘‘ಈಗ ದೇಶದ ಉದ್ದಗಲಕ್ಕೂ ಹರಡಿರುವ ಸುಮಾರು 29 ಕೋಟಿ ಸದಸ್ಯರ ಆಧಾರದೊಂದಿಗೆ ಭಾರತದಲ್ಲಿ ಸುಮಾರು 8.5 ಕೋಟಿ ಸಹಕಾರಿ ಸೊಸೈಟಿಗಳು ಇವೆ. ಈ ಕೋ-ಆಪರೇಟಿವ್ ಸೊಸೈಟಿಗಳು ಕೃಷ್ಯುತ್ಪನ ಸಂಸ್ಕರಣೆ, ಹೈನುಗಾರಿಕೆ, ವಸತಿ, ಮೀನುಗಾರಿಕೆ, ನೇಯ್ಗೆ ಹಾಗೂ ಸಾಲ ಮಾರುಕಟ್ಟೆಯಲ್ಲಿ ತೊಡಗಿಕೊಂಡಿವೆ’’ ಎಂದು ಸಹಕಾರಿ ಸಚಿವಾಲಯ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X