Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇನ್ನೂ 20 ಎಕರೆ ಗೋಮಾಳದ ಮೇಲೆ...

ಇನ್ನೂ 20 ಎಕರೆ ಗೋಮಾಳದ ಮೇಲೆ ರಾಷ್ಟ್ರೋತ್ಥಾನ ಕಣ್ಣು

ಶೇ.25ರಷ್ಟು ರಿಯಾಯಿತಿ ದರದಲ್ಲಿ ಜಮೀನುಗಳನ್ನು ಮಂಜೂರು ಮಾಡಿಸಿಕೊಳ್ಳಲು ಸರಕಾರದ ಮೇಲೆ ಒತ್ತಡ

ಜಿ.ಮಹಾಂತೇಶ್ಜಿ.ಮಹಾಂತೇಶ್7 Sept 2022 10:40 AM IST
share
ಇನ್ನೂ 20 ಎಕರೆ ಗೋಮಾಳದ ಮೇಲೆ ರಾಷ್ಟ್ರೋತ್ಥಾನ ಕಣ್ಣು

ಬೆಂಗಳೂರು, ಸೆ.6: ರಾಜ್ಯದ ವಿವಿಧೆಡೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್ ಇದೀಗ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹೊಸಪೇಟೆ, ಮಂಡ್ಯ, ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ಅಂದಾಜು 20 ಎಕರೆ ವಿಸ್ತೀರ್ಣದ ಗೋಮಾಳದ ಮೇಲೆ ಕಣ್ಣು ಹಾಕಿದೆ.

ರಾಜ್ಯದ ವಿವಿಧೆಡೆ ಗೋಮಾಳ ಜಮೀನುಗಳನ್ನು ಮಂಜೂರು ಮಾಡಿಸಿಕೊಳ್ಳಲು ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಕೇಶವ ಶಿಲ್ಪದಲ್ಲಿ ಕಚೇರಿ ಹೊಂದಿರುವ ರಾಷ್ಟ್ರೋತ್ಥಾನ ಪರಿಷತ್ ಸಂಸ್ಥೆಯು ಭೂ ಬ್ಯಾಂಕ್ ಹೊಂದಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಹುಕೋಟಿ ರೂ. ಬೆಲೆಬಾಳುವ ಜಮೀನುಗಳನ್ನು ಮಾರುಕಟ್ಟೆ ಬೆಲೆಯ ಶೇ.25ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡಿಸಿಕೊಳ್ಳಲು ಸರಕಾರದ ಮೇಲೆ ಸತತವಾಗಿ ಒತ್ತಡ ಹೇರುತ್ತಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ನೂತನ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಮುಂದಿರಿಸಿಕೊಂಡು ಶೈಕ್ಷಣಿಕ ಕೇಂದ್ರಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಗೋಮಾಳ ಜಮೀನು ಮಂಜೂರಿಗಾಗಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಇರುವ ಪ್ರಸ್ತಾವಗಳನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅವರು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಈ ಸಂಬಂಧ ಎನ್. ಮಂಜುನಾಥ್ ಪ್ರಸಾದ್ ಅವರು 2022ರ ಎಪ್ರಿಲ್ 21ರಂದು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಈ ಪತ್ರದ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ರಾಷ್ಟ್ರೋತ್ಥಾನ ಪರಿಷತ್‌ನ ವಿವಿಧ ಪ್ರಸ್ತಾವಗಳು ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಬಾಕಿ ಇದ್ದು ಸದರಿ ಪ್ರಸ್ತಾವಗಳನ್ನು ಕೂಡಲೇ ಜಿಲ್ಲಾಧಿಕಾರಿಯವರಿಂದ ಪಡೆದು ತುರ್ತಾಗಿ ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ ಎಂದು ಟಿಪ್ಪಣಿಯಲ್ಲಿ ವಿವರಿಸಲಾಗಿದೆ.

ಚಾಮರಾಜನಗರ ಯಡಪರೆ ಗ್ರಾಮ, ಚಿಕ್ಕಮಗಳೂರಿನ ಹಿರೇಮಗಳೂರು ಗ್ರಾಮದಲ್ಲಿ 8 ಎಕರೆ, ಮೈಸೂರು ತಾಲೂಕಿನ ಇಲವಾಲ ಗ್ರಾಮದಲ್ಲಿ 1 ಎಕರೆ, ಹೊಸಪೇಟೆಯಲ್ಲಿ 6 ಎಕರೆ, ಮಂಡ್ಯದ ಬಿ ಹೊಸೂರು ಗ್ರಾಮದಲ್ಲಿ ಒಟ್ಟು 5-20 ಎಕರೆ, ಯಾದಗಿರಿ ಜಿಲ್ಲೆಯ ಮರನಾಳ ಗ್ರಾಮದಲ್ಲಿ 5 ಎಕರೆ, ಆನೇಕಲ್ ತಾಲೂಕಿನಲ್ಲಿ 1-33 ಎಕರೆ ಸೇರಿದಂತೆ ಒಟ್ಟು 21 ಎಕರೆ ಜಮೀನು ಮಂಜೂರಾತಿಗಾಗಿ ರಾಷ್ಟ್ರೋತ್ಥಾನ ಪರಿಷತ್ ಸರಕಾರದ ಮೇಲೆ ಒತ್ತಡ ಹೇರಿರುವುದು ಪ್ರಸ್ತಾವಗಳಿಂದ ತಿಳಿದುಬಂದಿದೆ.

ಈಗಾಗಲೇ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿಯಲ್ಲಿ 9 ಎಕರೆ ವಿಸ್ತೀರ್ಣದ ಗೋಮಾಳವನ್ನು ಮಂಜೂರು ಮಾಡಿ ಈ ಸಂಬಂಧ ಆದೇಶವನ್ನು ಹೊರಡಿಸಿದೆ. ಮಾರುಕಟ್ಟೆಯಲ್ಲಿ ಅಂದಾಜು ರೂ. 9 ಕೋಟಿಗೂ ಅಧಿಕ ಬೆಲೆಬಾಳುತ್ತಿದ್ದರೂ ರಾಷ್ಟ್ರೋತ್ಥಾನ ಪರಿಷತ್‌ಗಾಗಿ ಮಾರುಕಟ್ಟೆ ಬೆಲೆಯಲ್ಲಿನ ಶೇ.25ರಷ್ಟು ರಿಯಾಯಿತಿ ದರದಲ್ಲಿ ಜಮೀನು ಮಂಜೂರು ಮಾಡಿರುವುದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X