ಬೆಂಗಳೂರು | ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ

ಬೆಂಗಳೂರು, ಸೆ.7: ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಬುಧವಾರ ಬೆಳಗ್ಗೆ ಐಟಿ ಅಧಿಕಾರಿಗಳು (IT Raid) ದಾಳಿ ನಡೆಸಿದ್ದಾರೆ. ತೆರಿಗೆ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ 6:30ರ ಸುಮಾರಿಗೆ ಏಕಕಾಲಕ್ಕೆ ನಗರದ ಹತ್ತಕ್ಕು ಅಧಿಕ ಮಣಿಪಾಲ್ ಆಸ್ಪತ್ರೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ. ಎಚ್ ಎಎಲ್ ಬಳಿಯಿರೋ ಮಣಿಪಾಲ್ ಆಸ್ಪತ್ರೆಗೆ ಬೆಳಗಿನ ಜಾವ 6:30ಕ್ಕೆ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಕಲ್ಲಿದ್ದಲು ಹಗರಣ: ಪಶ್ಚಿಮ ಬಂಗಾಳದ ಕಾನೂನು ಸಚಿವರ ನಿವಾಸಗಳಿಗೆ ಸಿಬಿಐ ದಾಳಿ
ಈ ನಡುವೆ ಉಡುಪಿಯಲ್ಲಿರುವ ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗಕ್ಕೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Next Story







