Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಳೆಹಾನಿ: ಕೇಂದ್ರ ಸರಕಾರದ...

ಮಳೆಹಾನಿ: ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಸಿಎಂ ಮನವಿ

ವಾರ್ತಾಭಾರತಿವಾರ್ತಾಭಾರತಿ7 Sept 2022 1:38 PM IST
share
ಮಳೆಹಾನಿ: ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಸಿಎಂ ಮನವಿ

ಬೆಂಗಳೂರು, ಸೆ.7: ರಾಜ್ಯ ಸರಕಾರವು ಮಳೆ ಹಾನಿಗೆ ಸಂಬಂಧಿಸಿ ಅತ್ಯಂತ ನಿಖರ ಹಾಗೂ ಪಾರದರ್ಶಕವಾಗಿ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವ ಸಲ್ಲಿಸಿದ್ದು, ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister of Karnataka Basavaraj Bommai) ಹೇಳಿದ್ದಾರೆ.

ಅವರು ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಯ ಕುರಿತು ಹಾಗೂ ರಾಜ್ಯ ಸರ್ಕಾರ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ವಿವರವಾದ ಮಾಹಿತಿ ಒದಗಿಸಲಾಯಿತು.

ತಂಡವು ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿತ್ತು. ಇದರೊಂದಿಗೆ ಅತಿ ಹೆಚ್ಚು ಭೂಕುಸಿತ, ಕಡಲ್ಕೊರೆತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುವಂತೆ ಮುಖ್ಯಮಂತ್ರಿ ಸಲಹೆ ನೀಡಿದರು.

ಇದನ್ನೂ ಓದಿ | ಮಧ್ಯಪ್ರದೇಶ: ಬರಿಗೈಯಲ್ಲಿ ಹುಲಿಯೊಂದಿಗೆ ಹೋರಾಡಿ ಒಂದು ವರ್ಷದ ಮಗನನ್ನು ರಕ್ಷಿಸಿದ ತಾಯಿ!

ಜೊತೆಗೆ ಬೆಂಗಳೂರು ನಗರ, ನೆರೆಯ ಮಂಡ್ಯ, ರಾಮನಗರ ಜಿಲ್ಲೆಗಳ  ಪ್ರವಾಹ ಪರಿಸ್ಥಿತಿಯನ್ನು ಸಹ ಅವಲೋಕಿಸುವಂತೆ ತಿಳಿಸಲಾಯಿತು.

ಈ ಬಾರಿ ಭಾರಿ ಸಂಖ್ಯೆಯಲ್ಲಿ ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ಸಂಭವಿಸಿದ ಹಾನಿ ಹಾಗೂ ರಾಮನಗರದ ರೇಷ್ಮೆ ರೀಲಿಂಗ್ ಘಟಕ ಹಾಗೂ ಟ್ವಿಸ್ಟಿಂಗ್ ಘಟಕಗಳಿಗೆ ಸಂಭವಿಸಿದ ಹಾನಿಯ ಕುರಿತೂ ಸಹ ಕೇಂದ್ರ ತಂಡದ ಗಮನಕ್ಕೆ ತಂದ ಮುಖ್ಯಮಂತ್ರಿ, ಮೊದಲ ಬಾರಿಗೆ ಇಂತಹ ಹಾನಿ ಸಂಭವಿಸಿದ್ದು, ಅವರಿಗೆ ಜೀವನೋಪಾಯಕ್ಕೆ ತೊಂದರೆಯಾಗಿದೆ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಅವರಿಗೆ ನೆರವು ನೀಡಲು ಪರಿಶೀಲಿಸುವಂತೆ ಕೋರಿದರು.

ಕಡಲ್ಕೊರೆತ

ರಾಜ್ಯವು 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಕಡಲ್ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು, ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿಯೂ ಹಿಂದೆ ಪ್ರವಾಹ ಕಾಣಿಸಿಕೊಳ್ಳದ ಕಲಬುರಗಿ, ಗದಗ, ಬೀದರ್, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಈ ಬಾರಿ ಪ್ರವಾಹ ಉಂಟಾಗಿದೆ.

ಕಳೆದ ನವೆಂಬರ್ ತಿಂಗಳಿನಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಮಳೆಯ ಮಾದರಿಯನ್ನು ಅಧ್ಯಯನ ನಡೆಸುವ ಅಗತ್ಯವಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಕೆರೆ ತುಂಬಿ ಹಾಗೂ ಕೆರೆ ಏರಿ ಒಡೆದು ಪ್ರವಾಹ ಉಂಟಾಗುತ್ತಿದೆ. ನದಿ ಪ್ರವಾಹಕ್ಕಿಂತ ಭಿನ್ನ ಪರಿಸ್ಥಿತಿ ಇದಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಮೂಲಸೌಕರ್ಯ ದುರಸ್ತಿಗೆ 1,600 ಕೋಟಿ ರೂ. ಬಿಡುಗಡೆ

ರಾಜ್ಯದಲ್ಲಿ ಕಳೆದ ನವೆಂಬರ್ ನಿಂದೀಚೆಗೆ ಮೂಲಸೌಕರ್ಯಗಳ ದುರಸ್ತಿಗೆ ಎರಡು ಬಾರಿ 500 ಕೋಟಿ ರೂ.ಗಳಂತೆ ಹಾಗೂ ಎರಡು ದಿನಗಳ ಹಿಂದೆ 600 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನೀಡುತ್ತಿದ್ದು, 18.58 ಲಕ್ಷ ರೈತರಿಗೆ ಒಟ್ಟು 2452 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರಲ್ಲಿ 1160 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರದ ಬೊಕ್ಕಸದಿಂದ ಭರಿಸಲಾಗಿದೆ. ಮನೆ ಹಾನಿಗೂ ನಷ್ಟದ ಪ್ರಮಾಣವನ್ನು ಆಧರಿಸಿ, ಪರಿಹಾರ ವಿತರಿಸಲಾಗುತ್ತಿದೆ. ಈ ಎಲ್ಲ ಪರಿಹಾರಗಳನ್ನೂ ಅತ್ಯಂತ ತ್ವರಿತವಾಗಿ, ಪಾರದರ್ಶಕವಾಗಿ ನೇರವಾಗಿ ಸಂತ್ರಸ್ತರ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಕಳೆದ ಒಂದು ವಾರದಿಂದೀಚೆಗೆ ಪುನಃ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರು, ರಾಮನಗರ, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ಬಹಳಷ್ಟು ಹಾನಿಯಾಗಿದೆ. ಈ ಅವಧಿಯಲ್ಲಿ ಸಂಭವಿಸಿದ ನಷ್ಟದ ಕುರಿತು ಪೂರಕ ಪ್ರಸ್ತಾವವನ್ನು ಸಹ ಕೂಡಲೇ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಕೇಂದ್ರ ತಂಡವು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ನೇತೃತ್ವದ ತಂಡವು ಕೇಂದ್ರ ಹಣಕಾಸು ಇಲಾಖೆಯ ಉಪಕಾರ್ಯದರ್ಶಿ ಮಹೇಶ್ ಕುಮಾರ್, ಇಂಧನ ಇಲಾಖೆಯ ಸಹಾಯಕ ನಿರ್ದೇಶಕ ಭಾವ್ಯ ಪಾಂಡೆ, ಜಲಶಕ್ತಿ ಸಚಿವಾಲಯದ ಅಶೋಕ್ ಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀಕ್ಷಕ ಅಭಿಯಂತರ ವಿ.ವಿ.ಶಾಸ್ತ್ರಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಡಾ. ಕೆ. ಮನೋಹರನ್, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್.ಬಿ. ತಿವಾರಿ ಅವರನ್ನು ಒಳಗೊಂಡಿದೆ.

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X