ಪರೀಕ್ಷೆಯಲ್ಲಿ ಮಂಗಳೂರು ವಿವಿ ಎಡವಟ್ಟು: ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ಖಂಡನೆ

ಮಂಗಳೂರು, ಸೆ.7: ಮಂಗಳೂರು ವಿಶ್ವವಿದ್ಯಾನಿಲಯವು ಇತ್ತೀಚೆಗೆ ಒಂದಿಲ್ಲೊಂದು ವಿಷಯದಲ್ಲಿ ಸುದ್ದಿಯಾಗುತ್ತಲೇ ಇದೆ. ಪ್ರವೇಶಾತಿ, ನೇಮಕಾತಿ, ಪರೀಕ್ಷಾ ವೇಳಾಪಟ್ಟಿ, ಫಲಿತಾಂಶ ಎಲ್ಲದರಲ್ಲೂ ಗೊಂದಲ ಸೃಷ್ಟಿಸಿದ ವಿ.ವಿ ಇದೀಗ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲೂ ಎಡವಟ್ಟು ಮಾಡಿಕೊಂಡಿದೆ. ಅಲ್ಲದೆ ಕೊನೆ ಕ್ಷಣದಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಇದು ವಿ.ವಿ. ಪರೀಕ್ಷಾಂಗ ವಿಭಾಗದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ಈಸ್ಟ್ ಜಿಲ್ಲಾ ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟನೆ ತಿಳಿಸಿದೆ.
Next Story





