ಕಡಬ: ಮರವೇರಿ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶ: ವ್ಯಕ್ತಿ ಮೃತ್ಯು

ಕಡಬ, ಸೆ.7: ವ್ಯಕ್ತಿಯೋರ್ವ ಮನೆ ಸಮೀಪದ ಮರವನ್ನೇರಿ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಸ್ಪರ್ಶಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬ ಸಮೀಪದ ಕುಂತೂರು ಎಂಬಲ್ಲಿ ಬುಧವಾರ ನಡೆದಿರುವುದು ವರದಿಯಾಗಿದೆ.
ಮೃತರನ್ನು ಕಡಬ ಸಮೀಪದ ಕುಂತೂರು ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.
ಇವರು ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಅಲ್ಲೇ ಪಕ್ಕದಲ್ಲಿ ಹಾದು ಹೋಗಿರುವ 33 ಕೆವಿ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ.

Next Story





