Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಸುನೀಲ್‍ಕುಮಾರ್ ಸುಳ್ಳು...

ಸಚಿವ ಸುನೀಲ್‍ಕುಮಾರ್ ಸುಳ್ಳು ಹೇಳುವುದನ್ನು ನಿಲ್ಲಿಸಿ ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ ಆಗ್ರಹ

''ಮೂರ್ಖರ ಸಹವಾಸದಿಂದ ಹೊರಗೆ ಬನ್ನಿ''

ವಾರ್ತಾಭಾರತಿವಾರ್ತಾಭಾರತಿ7 Sept 2022 5:15 PM IST
share
ಸಚಿವ ಸುನೀಲ್‍ಕುಮಾರ್ ಸುಳ್ಳು ಹೇಳುವುದನ್ನು ನಿಲ್ಲಿಸಿ ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಸೆ.7: ನಮ್ಮ ಸರಕಾರದ ಅವಧಿಯಲ್ಲಿ ರೈತರ ಪಂಪ್ ಸೆಟ್ಟುಗಳಿಗೆ ಮೀಟರ್ ಅಳವಡಿಸಲು ಹುನ್ನಾರ ನಡೆದಿತ್ತು, ರಾಜ್ಯ ಮತ್ತು ಇಂಧನ ಇಲಾಖೆ ಮೇಲೆ ಸಾಲ ಹೊರಿಸಿದ್ದರು. ಸೋಲಾರ್ ವಿದ್ಯುತ್ ಅನ್ನು ಅವಾಸ್ತವಿಕ ಮೊತ್ತಕ್ಕೆ ಖರೀದಿಸಿದ್ದರು ಎಂದು ಆರೋಪಿಸಿರುವ ಇಂಧನ ಸಚಿವ ವಿ.ಸುನೀಲ್ ಕುಮಾರ್ ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರೈತರ ಪಂಪ್ ಸೆಟ್ಟುಗಳಿಗೆ ಮೀಟರ್ ಎಲ್ಲಿ ಅಳವಡಿಸಿದ್ದೇವೆ? ಇದಕ್ಕೆ ಟೆಂಡರ್ ಕರೆದಿದ್ದೇವಾ? ಯಾವ ಕಂಪೆನಿಗೆ ಆದೇಶ ಕೊಟ್ಟಿದ್ದೆವು? ಮೀಟರ್ ಅಳವಡಿಸಲು ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿದ್ದರೆ ಅದರ ಪ್ರತಿಗಳೆಲ್ಲಿವೆ? ಯಾವ ರೈತರಿಗೆ ತೊಂದರೆ ಕೊಟ್ಟಿದ್ದೇವೆ? ಎಂಬ ದಾಖಲೆ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೋದಿ ಸರಕಾರ ಹೊಸ ವಿದ್ಯುತ್ ಕಾಯ್ದೆಯನ್ನು ಜಾರಿಗೊಳಿಸಲು, ರೈತರ ಪಂಪ್ ಸೆಟ್ಟುಗಳಿಗೆ ಮೀಟರ್ ಅಳವಡಿಸಲು ಹುನ್ನಾರ ನಡೆಸುತ್ತಿದೆ. ಹೊಸ ವಿದ್ಯುತ್ ಮಸೂದೆಯನ್ನು ಈಗಾಗಲೆ ಸಂಸತ್ತಿನಲ್ಲಿ ಮಂಡಿಸಿದೆ. ನಮ್ಮ ಸರಕಾರ ಇದ್ದಾಗ ಈ ರೀತಿಯ ರೈತ ದ್ರೋಹದ ಕಾನೂನನ್ನು ಜಾರಿಗೆ ತಂದಿದ್ದರೆ ಅದರ ದಾಖಲೆ ಬಿಡುಗಡೆ ಮಾಡಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಮೋದಿ ಸರಕಾರ ತರಲು ಹೊರಟಿರುವ ವಿದ್ಯುತ್ ಮಸೂದೆ ವಿರುದ್ಧ ಮುಂದಿನ ಅಧಿವೇಶನದಲ್ಲಿ ನೀವೇ ನಿರ್ಣಯವನ್ನು ಮಂಡಿಸಿ. ಯಾವ ಕಾರಣಕ್ಕೂ ಕರ್ನಾಟಕದ ರೈತರ ಮೇಲೆ ಹಾಗೂ ಉಳಿದೆಲ್ಲ ಜನ ವರ್ಗಗಳ ಮೇಲೆ ಈ ಕರಾಳ ಕಾನೂನನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲವೆಂದು ಒಮ್ಮತದ ನಿರ್ಣಯವನ್ನು ಅಂಗೀಕರಿಸಿ ಕಳಿಸೋಣ ಎಂದು ಅವರು ಆಗ್ರಹಿಸಿದ್ದಾರೆ.

ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲ ಇತ್ತು. ಈ ಸಾಲವನ್ನು ಹೀಗೇ ಬಿಟ್ಟರೆ, ವಿದ್ಯುತ್ ಇಲಾಖೆ ಮುಳುಗಿ ಹೋಗುತ್ತದೆ ಎಂದು ಎಸ್ಕಾಂಗಳ ಬಾಕಿ ತೀರಿಸಲು ಸಾಲ ಮಾಡಿದ್ದೆವು. ರಾಜ್ಯ ಸರಕಾರದ ಇಲಾಖೆಗಳು ವಿದ್ಯುತ್ ಇಲಾಖೆಗೆ ಪಾವತಿಸದೆ ಉಳಿಸಿಕೊಂಡಿದ್ದ ಬಾಕಿಗಳನ್ನು ತೀರಿಸಿ ಅವುಗಳ ಹೊರೆ ಕಡಿಮೆ ಮಾಡಿದ್ದನ್ನು ಸುನಿಲ್ ಕುಮಾರ್ ನಷ್ಟಕ್ಕೆ ತಂದರು ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ರಾಜಕೀಯಕ್ಕಾಗಿ ಹೇಳುತ್ತಿರುವ ಸುಳ್ಳು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

2014-15ರಲ್ಲಿ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿದ್ದ ವಿದ್ಯುತ್ 14,825 ಮೆ.ವ್ಯಾಟ್ ಮಾತ್ರ. ಅದರಲ್ಲಿ ಸೋಲಾರ್ ಮೂಲದಿಂದ 118 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 2,655 ಮೆ.ವ್ಯಾ.ಆಗುತ್ತಿತ್ತು. 2018ರ ವೇಳೆಗೆ ಸೋಲಾರ್ ಮೂಲದಿಂದ 6,157 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 4,730 ಮೆ.ವ್ಯಾ.ವಿದ್ಯುತ್ ಉತ್ಪಾದನೆ ಮಾಡುವ ಸ್ಥಿತಿಗೆ ರಾಜ್ಯವು ತಲುಪಿತು ಎಂದು ಅವರು ಹೇಳಿದ್ದಾರೆ.

ಕಲ್ಲಿದ್ದಲು ಮೂಲದ ಉಷ್ಣ ವಿದ್ಯುತ್ 2014-15 ರಲ್ಲಿ 6197 ಮೆ.ವ್ಯಾ.ಇದ್ದದ್ದು, 2018 ರ ವೇಳೆಗೆ 11,366 ಮೆ.ವ್ಯಾಟ್ ಆಯಿತು. ನಮ್ಮ 5 ವರ್ಷಗಳ ಆಡಳಿತದ ಅವಧಿಯಲ್ಲಿ 13,175 ಮೆ.ವ್ಯಾ.ವಿದ್ಯುತ್ ಅನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾರಂಭಿಸಿದೆವು. 2014-15 ರಲ್ಲಿ ನವೀಕರಿಸಬಹುದಾದ ಇಂಧನ ಮೂಲದಿಂದ ಉತ್ಪಾದನೆಯಾಗುತ್ತಿದ್ದ ವಿದ್ಯುತ್ 4,855 ಮೆ.ವ್ಯಾ.ಗಳಷ್ಟಿತ್ತು. 2018ರ ವೇಳೆಗೆ ಅದು 13,500ಕ್ಕೂ ಹೆಚ್ಚು ಮೆ.ವ್ಯಾ.ಗಳಿಗೆ ತಲುಪಿತು ಎಂದು ಅವರು ತಿಳಿಸಿದ್ದಾರೆ.

ಇದು ಕಾಂಗ್ರೆಸ್ ಸರಕಾರದ ಶ್ರಮದಿಂದ ಆದದ್ದು. ನಾವು ಮಾಡಿದ್ದ ಕೆಲಸದಿಂದ ನೀವು ಹಣಗಳಿಸುತ್ತಿದ್ದರೆ, ಕೆಲಸದ ಕ್ರೆಡಿಟ್ಟು ಯಾರಿಗೆ ಸಲ್ಲಬೇಕು? ಬಿಜೆಪಿ ಸರಕಾರ ಮಾರುತ್ತಿರುವ ವಿದ್ಯುತ್ ಅನ್ನು ಉತ್ಪಾದಿಸಲು ಕ್ರಮ ಕೈಗೊಂಡವರು ಯಾರು? ನಿಮ್ಮ ಸರಕಾರ ಬಂದಾದ ಮೇಲೆ ಎಷ್ಟು ವಿದ್ಯುತ್ ಉತ್ಪಾದನೆಯನ್ನು ಹೊಸದಾಗಿ ಮಾಡಿದ್ದೀರಿ? ವಿದ್ಯುತ್ ಉತ್ಪಾದನೆಗಾಗಿ ಎಷ್ಟು ಬಂಡವಾಳ ಹೂಡಿದ್ದೀರಿ? ಹಾಗೂ ನಾವು ಉತ್ಪಾದನೆ ಮಾಡಲು ಪ್ರಾರಂಭಿಸಿದ ವಿದ್ಯುತ್ ಅನ್ನು ಎಷ್ಟು ಮಾರಾಟ ಮಾಡುತ್ತಿದ್ದೀರಿ? ಎಂಬ ದಾಖಲೆಗಳನ್ನು ಬಿಡುಗಡೆ ಮಾಡಿ ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ ಬೇಸಿಗೆಯಲ್ಲಿ ಸುಮಾರು 11 ರಿಂದ 13 ಸಾವಿರ ಮೆ.ವ್ಯಾ.ಗಳಷ್ಟು ಇದೆ. ಮಳೆಗಾಲದಲ್ಲಿ 8 ರಿಂದ 9 ಸಾವಿರ ಮೆ.ವ್ಯಾ.ಗಳಿಗೆ ಬೇಡಿಕೆಯಿರುತ್ತದೆ. ಇನ್ನು ಉಳಿಕೆಯಾಗುವ ಸುಮಾರು 18 ರಿಂದ 20 ಸಾವಿರ ಮೆ.ವ್ಯಾ. ವಿದ್ಯುತ್ ಮಾರಾಟಕ್ಕೆ ಯಾವ ಕ್ರಮ ಕೈಗೊಂಡಿದ್ದೀರಿ ಎಂಬುದನ್ನು ಶ್ವೇತಪತ್ರದ ಮೂಲಕ ರಾಜ್ಯದ ಜನತೆಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಮ್ಮ ಸರಕಾರ ಸೋಲಾರ್ ವಿದ್ಯುತ್ ಅನ್ನು ಪ್ರತಿ ಯೂನಿಟ್‍ಗೆ 5 ರಿಂದ 11 ರೂ.ಗಳವರೆಗೆ ಕೊಟ್ಟು ಅವಾಸ್ತವಿಕ ಖರೀದಿ ಒಪ್ಪಂದವನ್ನು ಮಾಡಿಕೊಂಡಿತ್ತು ಎಂದು ಆರೋಪ ಮಾಡಿದ್ದೀರಿ. ಈ ದರಗಳನ್ನು ಕಡಿಮೆ ಮಾಡಿ, 3 ರೂ. ಒಳಗೆ ಒಪ್ಪಂದ ಮಾಡಿಕೊಂಡಿದ್ದರೆ ರಾಜ್ಯಕ್ಕೆ 2 ಸಾವಿರ ಕೋಟಿ ರೂ.ನಷ್ಟ ತಪ್ಪುತ್ತಿತ್ತು ಎಂದೂ ಹೇಳಿದ್ದೀರಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಆದರೆ, ನಿಮ್ಮ ವಿಶ್ವಗುರು ಮೋದಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮತ್ತು ಆನಂತರದಲ್ಲಿ ಗುಜರಾತ್‍ನಲ್ಲಿ ಪ್ರತಿ ಯೂನಿಟ್ ವಿದ್ಯುತ್ ಖರೀದಿಸಲು ಎಷ್ಟು ರೂಪಾಯಿಗಳಿಗೆ ಒಪ್ಪಂದ ಮಾಡಿಕೊಂಡಿದೆ ತಿಳಿಸಿ? ದೇಶದಲ್ಲಿ ಯಾವ, ಯಾವ ರಾಜ್ಯಗಳು 2010 ರಿಂದ 2022 ರವರೆಗೆ ಎಷ್ಟು ರೂ.ಗಳಿಗೆ ಸೋಲಾರ್ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿಕೊಂಡಿವೆ ಎಂಬುದರ ಕುರಿತು ಶ್ವೇತಪತ್ರವನ್ನು ಹೊರಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಗುಜರಾತ್‍ನ ಬಿಜೆಪಿ ಸರಕಾರ ಮತ್ತು ಕರ್ನಾಟಕದ ಕಾಂಗ್ರೆಸ್ ಸರಕಾರದ ಅವಧಿಗಳಲ್ಲಿ ವಿದ್ಯುತ್ ಖರೀದಿ ಒಪ್ಪಂದಗಳ ಕುರಿತು ತೌಲನಿಕವಾದ ದಾಖಲೆಗಳನ್ನು ಒಳಗೊಂಡಂತೆ ಶ್ವೇತಪತ್ರವನ್ನು ಹೊರಡಿಸಬೇಕು. 2017-18ರವರೆಗೆ ಸೋಲಾರ್ ವಿದ್ಯುತ್ ಅತ್ಯಂತ ದುಬಾರಿಯಾಗಿತ್ತು. ಆ ನಂತರದಲ್ಲಿಸೋಲಾರ್ ಪ್ಯಾನೆಲ್ ಮುಂತಾದ ಉಪಕರಣಗಳ ಬೆಲೆ ಇಳಿಕೆ ಕಂಡಿತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಲಹೆಗಳು: ರಾಜ್ಯ ಸರಕಾರವು ಖರೀದಿಸುತ್ತಿರುವ ವಿದ್ಯುತ್ ಬಿಲ್ಲನ್ನು ದೂರದ ಪ್ರದೇಶದಲ್ಲಿ ಉತ್ಪಾದಿಸುತ್ತಿರುವ ಗ್ರಿಡ್‍ಗಳ ಮೀಟರ್‍ಗಳನ್ನು ಆಧರಿಸಿಯೇ ಪಾವತಿಸುತ್ತಿದೆ. ಇದನ್ನು ನಿಲ್ಲಿಸಿ, ರಾಜ್ಯದ ಒಳಗಿನ ಗ್ರಿಡ್‍ಗಳಿಗೆ ಬಂದ ಮೇಲೆ ಲೆಕ್ಕ ಹಾಕಿ ಬಿಲ್ ಪಾವತಿಸಿದರೆ ಸುಮಾರು 1,800 ಕೋಟಿ ರೂ.ಗಳವರೆಗೆ ಉಳಿತಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಒಪ್ಪಂದದ ಅವಧಿ ಮುಗಿದಿರುವ ಹಾಗೂ ಒಂದೆರಡು ವರ್ಷಗಳಲ್ಲಿ ಮುಗಿಯುತ್ತಿರುವ ಉಡುಪಿಯ ಅದಾನಿ ಪವರ್ಸ್ ಮುಂತಾದ ಖಾಸಗಿಯವರಿಂದ ಖರೀದಿಸುತ್ತಿರುವ ವಿದ್ಯುತ್ ಅನ್ನು ನಿಲ್ಲಿಸಬೇಕು ಇದರಿಂದ ವರ್ಷಕ್ಕೆ ಸುಮಾರು 4,500 ಕೋಟಿ ರೂ.ಉಳಿತಾಯವಾಗುತ್ತದೆ. ಸೆಂಟ್ರಲ್ ಗ್ರಿಡ್‍ಗಳಿಂದ ಖರೀದಿಸುತ್ತಿರುವ ನಾವು ಬಳಸದ ವಿದ್ಯುತ್‍ಗಾಗಿ 4,500 ಕೋಟಿ ರೂ.ಗಳವರೆಗೆ ಪಾವತಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ಕಂಪೆನಿಯ 1,080 ಮೆ.ವ್ಯಾ.ವಿದ್ಯುತ್ ಖರೀದಿಯ ಅವಧಿ 2024ಕ್ಕೆ ಮುಕ್ತಾಯವಾಗುತ್ತದೆ. ಅದಾನಿ ಕಂಪನಿಯಿಂದ 2019-20ರಲ್ಲಿ 505 ಕೋಟಿ ರೂ.ಗಳ ವಿದ್ಯುತ್ ಖರೀದಿ ಮಾಡಿದ್ದರೆ, ಪಾವತಿಸಿರುವುದು 1,092 ಕೋಟಿ. ಕಳೆದ 3 ವರ್ಷಗಳಿಂದಲೂ ಹೀಗೆ ಆಗಿದೆ ಅದನ್ನು ಯಾಕೆ ಹೆಚ್ಚಿಗೆ ಪಾವತಿಸಲಾಗಿದೆ ಎಂಬುದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೋನಾ ಅವಧಿಯಲ್ಲಿ ಮತ್ತು ಆನಂತರ ಖಾಸಗಿ ವಿದ್ಯುತ್ ಖರೀದಿದಾರರಿಂದ ಯಾವ ಕಾರಣಕ್ಕೆ ವಿದ್ಯುತ್ ಖರೀದಿ ಮಾಡಲಾಯಿತು? ಈ ಅವಧಿಯಲ್ಲಿ ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳನ್ನು ಯಾಕೆ ಮುಚ್ಚಲಾಗಿತ್ತು? ರಾಜ್ಯದ ಗ್ರಿಡ್‍ಗಳು ಖಾಸಗಿಯವರು ಮತ್ತು ಕೇಂದ್ರದ ಗ್ರಿಡ್‍ಗಳಿಗಿಂತ ಪ್ರತಿ ಯೂನಿಟ್‍ಗೆ 0.50 ಪೈಸೆಯಷ್ಟು ಕಡಿಮೆ ದರಕ್ಕೆ ಕೆಪಿಸಿಎಲ್ ಮಾರಲು ತಯಾರಿದ್ದರೂ, ಅದನ್ನು ನಿರಾಕರಿಸಿ, ಆರ್‍ಟಿಪಿಎಸ್ ಮತ್ತು ವೈಟಿಪಿಎಸ್‍ಗಳನ್ನು ಮುಚ್ಚಿ, ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದು ಏಕೆ? ರಾಜ್ಯದ ಖಜಾನೆಗೆ ಇದರಿಂದಾದ ನಷ್ಟವೆಷ್ಟು? ಎಂಬ ಲೆಕ್ಕವನ್ನು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಚಿವರು ಇನ್ನು ಮುಂದಾದರೂ ರಾಜ್ಯದ ಜನರಿಗೆ ಸುಳ್ಳು ಹೇಳುವುದನ್ನು ಬಿಟ್ಟು ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಇಡೀ ದೇಶದಲ್ಲಿಯೇ ಅತಿ ಹೆಚ್ಚು ದರಗಳನ್ನು ಪಾವತಿಸುತ್ತಿರುವ ಕನ್ನಡಿಗರ ಮೇಲಿನ ವಿದ್ಯುತ್ ಶುಲ್ಕದ ಹೊರೆಗಳನ್ನು ಕಡಿಮೆ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸಣ್ಣ ಮತ್ತು ಗೃಹ ಕೈಗಾರಿಕೆಗಳಿಗೆ ಸಾಧ್ಯವಾದಷ್ಟು ಕಡಿಮೆ ದರದಲ್ಲಿ ವಿದ್ಯುತ್ ಅನ್ನು ಒದಗಿಸಿ, ಉತ್ಪಾದನಾ ಚಟುವಟಿಕೆಗಳನ್ನು ಹೆಚ್ಚಿಸುವಂತೆ ಆ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
 
''ಮೂರ್ಖರ ಸಹವಾಸದಿಂದ ಹೊರಗೆ ಬನ್ನಿ''

ಸೋಲಾರ್ ವಿದ್ಯುತ್ ಅನ್ನು ರಾತ್ರಿ ಸಮಯದಲ್ಲೂ ಬಳಸಲು ಬೇಕಾದ ತಂತ್ರಜ್ಞಾನದ ಹುಡುಕಾಟ ವಿಶ್ವಮಟ್ಟದಲ್ಲಿ ನಡೆಯುತ್ತಿದೆ. ಇಂಥ ಎಲ್ಲ ತಂತ್ರಜ್ಞಾನಗಳು ನಮ್ಮಲ್ಲೆ ವೇದಕಾಲದಲ್ಲೆ ಇದ್ದವು ಎನ್ನುವ ಮೂರ್ಖರ ಸಹವಾಸದಿಂದ ಹೊರಗೆ ಬಂದು ಸಮರ್ಥ ವಿಜ್ಞಾನಿಗಳ, ತಂತ್ರಜ್ಞರ ತಂಡ ರಚಿಸಿ ತಂತ್ರಜ್ಞಾನವನ್ನು ನಿರ್ಮಿಸಲು ಕಾರ್ಯೊನ್ಮುಖರಾಗಿ. ಈಗ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ವಿದ್ಯುತ್ ಮುಂದಿನ 50 ವರ್ಷಗಳಿಗೆ ಸಾಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿ

ರಾಜ್ಯ ಬಿಜೆಪಿ ಸರಕಾರಕ್ಕೆ ವಿದ್ಯುತ್ ಇಲಾಖೆಯ ಕುರಿತು ತನಿಖೆ ಮಾಡುವ ಉದ್ದೇಶವಿದ್ದರೆ 2008 ರಿಂದ ನಡೆದ ಎಲ್ಲ ಖರೀದಿ ಒಪ್ಪಂದಗಳಿಂದ ಹಿಡಿದು ಈ ವರೆಗಿನ ಪ್ರತಿಯೊಂದು ವಹಿವಾಟುಗಳನ್ನೂ ಸೇರಿಸಿ, ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ. ವಿದ್ಯುತ್ ಇಲಾಖೆಗೆ ಸಂಬಂಧಪಟ್ಟಂತೆ ಕಳೆದ 15 ವರ್ಷಗಳಿಂದ ಏನೇನಾಗಿದೆ ಎಂಬುದರ ಕುರಿತು ಶ್ವೇತಪತ್ರವನ್ನು ಹೊರಡಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X