Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಕನ್ನಡಕ್ಕೆ...

ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು: ಟಿ.ಎಸ್.ನಾಗಾಭರಣ

ವಾರ್ತಾಭಾರತಿವಾರ್ತಾಭಾರತಿ7 Sept 2022 6:14 PM IST
share
ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು: ಟಿ.ಎಸ್.ನಾಗಾಭರಣ

ಶಿವಮೊಗ್ಗ, ಸೆ.07: ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‌ಸೈಟ್‌ಗಳಲ್ಲಿ ಮತ್ತು ತಂತ್ರಾಂಶಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಪ್ರಥಮ ಆದ್ಯತೆಯನ್ನು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಕನ್ನಡ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿದರು.

ಕೆಲವು ಇಲಾಖೆಗಳ ವೆಬ್‌ಸೈಟ್‌ನಲ್ಲಿ ಮುಖಪುಟದಲ್ಲಿ ಕನ್ನಡ ಭಾಷೆ ಬಳಕೆ ಇದ್ದರೂ, ಮಾಹಿತಿಗಳು ಇಂಗ್ಲಿಷ್ ಭಾಷೆಯಲ್ಲಿವೆ. ವೆಬ್‌ಸೈಟ್‌ಗಳಲ್ಲಿ ಪ್ರತಿ ಮಾಹಿತಿ ಕೂಡಾ ಕನ್ನಡದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದೇ ರೀತಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ತಂತ್ರಾಂಶಗಳಲ್ಲಿ ಸಹ ಕಡ್ಡಾಯವಾಗಿ ಕನ್ನಡವನ್ನು ಅಳವಡಿಸಬೇಕು. ಜನಸಾಮಾನ್ಯರಿಗೆ ನೇರವಾಗಿ ಸೇವೆಯನ್ನು ಒದಗಿಸುವ ಇಲಾಖೆಗಳಲ್ಲಿ ಕನ್ನಡದ ಅನುಷ್ಟಾನ ಕಡ್ಡಾಯವಾಗಿ ಶೇ.100ರಷ್ಟು ಜಾರಿಯಾಗಬೇಕು ಎಂದು ಅವರು ಹೇಳಿದರು.

ಇದೇ ರೀತಿ ಬ್ಯಾಂಕ್, ಆರ್‍ಟಿಒ, ಮೆಸ್ಕಾಂ, ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸೇವೆಗಳನ್ನು ಕನ್ನಡದಲ್ಲಿಯೇ ಒದಗಿಸಬೇಕು. ಇಲ್ಲಿ ಅರ್ಜಿ ನಮೂನೆಗಳು, ಚಲನ್ ಇತ್ಯಾದಿಗಳು ಕನ್ನಡದಲ್ಲಿಯೂ ಇರುವಂತೆ ಖಾತ್ರಿಪಡಿಸಬೇಕು. ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಸ್ಥಳೀಯ ಸಂಸ್ಥೆಗಳು ಅಂಗಡಿಗಳಿಗೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಇದನ್ನು ಅನುಷ್ಠಾನಗೊಳಿಸಬೇಕು ಎಂದರು.

ಬಹುತೇಕ ಇಲಾಖೆಗಳು ಕನ್ನಡದಲ್ಲಿಯೇ ಸೇವೆಯನ್ನು ಒದಗಿಸುತ್ತಿದ್ದರೂ, ಸಂಪೂರ್ಣ ಅನುಷ್ಟಾನ ಇನ್ನೂ ಆಗುತ್ತಿಲ್ಲ. ವೈದ್ಯರು ನೀಡುವ ಪೋಸ್ಟ್‌ಮಾರ್ಟಂ ವರದಿ, ಬ್ಯಾಂಕ್‌ಗಳ ಪತ್ರ ವ್ಯವಹಾರ, ಸಾರ್ವಜನಿಕ ಸೇವೆಗಳು, ಔಷಧಿಗಳ ಹೆಸರು ಇತ್ಯಾದಿಗಳು ಕನ್ನಡದಲ್ಲಿ ಸಹ ಇರುವಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆಗಳು ಪ್ರಕಟಿಸುವ ಟೆಂಡರ್ ಅಧಿಸೂಚನೆಗಳು ಇನ್ನೂ ಇಂಗ್ಲಿಷ್‌ನಲ್ಲಿರುವುದನ್ನು ಗಮನಿಸಲಾಗಿದೆ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಟೆಂಡರ್ ಅಧಿಸೂಚನೆ ಪ್ರಕಟಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಅನುಷ್ಟಾನದಲ್ಲಿನ ಲೋಪಗಳ ಕುರಿತು ಪ್ರಾಧಿಕಾರಕ್ಕೆ ಬಂದಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಗೋಪಾಲಗೌಡ ಬಡಾವಣೆಯಲ್ಲಿರುವ ರಾಷ್ಟ್ರೀಯ ಬ್ಯಾಂಕ್‌ನಲ್ಲಿ ಅರ್ಜಿ ನಮೂನೆಗಳು ಕನ್ನಡದಲ್ಲಿ ಇಲ್ಲದ ಬಗ್ಗೆ ದೂರುಗಳು ಬಂದಿದ್ದು, ಇದನ್ನು ತಕ್ಷಣ ಸರಿಪಡಿಸಬೇಕು. ಶಿಕ್ಷಕರ ಕೊರತೆಯಿಂದ ಮುಚ್ಚಲಾಗಿರುವ ಸರ್ಕಾರಿ ಶಾಲೆಗಳ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳ ವಿವರಗಳನ್ನು ಒದಗಿಸಬೇಕು. ಕನ್ನಡ ಕಲಿಕಾ ಅಧಿನಿಯಮ 2017 ಅನ್ವಯ ಪ್ರತಿ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ಕಡ್ಡಾಯವಾಗಿ ಕನ್ನಡವನ್ನು ಕಲಿಸಬೇಕಾಗಿದ್ದು, ಅದರ ಅನುಷ್ಟಾನ ಪರಿಶೀಲಿಸಬೇಕು. ಕನ್ನಡ ಅಂಕಿಗಳ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನವೆಂಬರ್ 1ರಿಂದ ಕನ್ನಡ ಅಂಕಿ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ವೇದಿಕಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X