ಸೆ.10: ಉಡುಪಿ ಧರ್ಮಪ್ರಾಂತ್ಯದಿಂದ ಶಿಕ್ಷಕರ ದಿನಾಚರಣೆ

ಉಡುಪಿ, ಸೆ.7: ಕಥೊಲಿಕ್ ಎಜುಕೇಶನಲ್ ಸೊಸೈಟಿ ಉಡುಪಿ ಧರ್ಮ ಪ್ರಾಂತ್ಯದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಅಭಿನಂದನಾ ಕಾರ್ಯ ಕ್ರಮ ಸೆ.10ರಂದು ಬೆಳಿಗ್ಗೆ 9.30ಕ್ಕೆ ಉಡುಪಿ ಚರ್ಚ್ ವಠಾರದಲ್ಲಿರುವ ಧರ್ಮಾಧ್ಯಕ್ಷರ ನಿವಾಸದ ನೆಲಮಹಡಿಯ ಆವೆ ಮರಿಯಾ ಸಭಾಂಗಣದಲ್ಲಿ ಜರಗಲಿದೆ.
ಅಧ್ಯಕ್ಷತೆಯನ್ನು ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಕಥೊಲಿಕ್ ಎಜುಕೇಶನಲ್ ಸೊಸೈಟಿ ಅಧ್ಯಕ್ಷರ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ., ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವಾಲಯದ ನಿವೃತ್ತ ಶಾಖಾಧಿಕಾರಿ ಅಕ್ಬರ್ ಆಲಿ ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಕಾರ್ಯದರ್ಶಿ ವಂ.ವಿನ್ಸೆಂಟ್ ಕ್ರಾಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





