ದೈವಸ್ಥಾನಕ್ಕೆ ನುಗ್ಗಿ ಕಾಣಿಕೆ ಡಬ್ಬಿ ಕಳವು

ಮಲ್ಪೆ: ಬೆಳ್ಕಳೆ ಶ್ರೀಬಬ್ಬುಸ್ವಾಮಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವು ಮಾಡಿರುವ ಘಟನೆ ಸೆ.6ರಂದು ಮಧ್ಯಾಹ್ನ ವೇಳೆ ನಡೆದಿದೆ.
ದೈವಸ್ಥಾನದಲ್ಲಿ ಮೂರು ಕಾಣಿಕೆ ಡಬ್ಬಿ ಇಟ್ಟಿದ್ದು, ಮಧ್ಯಾಹ್ನ ವೇಳೆ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಮೂಕಾಂಬಿಕ ದೇವಿಯ ಸನ್ನಿಧಿಯಲ್ಲಿರುವ ಕಾಣಿಕೆ ಡಬ್ಬಿಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





