ಸೆ.10ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ

ಉಡುಪಿ, ಸೆ.7: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸೆ.10ರಂದು ಬೆಳಗ್ಗೆ 10.30ಕ್ಕೆ ನಗರದ ಬನ್ನಂಜೆ ಶ್ರೀನಾರಾಯಣಗುರು ಮಂದಿರದ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಆನಂದ ಪೂಜಾರಿ ಕಿದಿಯೂರು ಭಾಗವಹಿ ಸಲಿದ್ದು, ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





