ಪ.ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ

ಉಡುಪಿ, ಸೆ.7: ಮಂಗಳೂರಿನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಹಾಗೂ ಎ.ಐ.ಟಿ.ಟಿ ವಿಭಾಗದಡಿ ಎಸೆಸೆಲ್ಸಿ, ಐಟಿಐ, ಡಿಪ್ಲೋಮಾ, ಬಿ.ಇ ವಿದ್ಯಾಭ್ಯಾಸ ಪಡೆಯು ತ್ತಿರುವ ಹಾಗೂ ಈಗಾಗಲೇ ವಿದ್ಯಾರ್ಹತೆ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ತಾಂತ್ರಿಕ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು, ಇ-ಮೇಲ್: gttcmng@gmail.com, ದೂ.ಸಂಖ್ಯೆ: 0824-248003, ಮೊ.ನಂ: 9880591219, 7975621917 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





