ಬಂಟ್ವಾಳ; ಜ್ವರದಿಂದ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ, ಸೆ. 7: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾಳೆ.
ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ (20) ಮೃತಪಟ್ಟ ವಿದ್ಯಾರ್ಥಿನಿ.
ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಸೆ.6 ರಂದು ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋದ ವೇಳೆ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಅವರು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಮನೆಯವರು ತಿಳಿಸಿದ್ದಾರೆ.
ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು ಕಲಿಕೆಯಲ್ಲಿ ಮುಂದಿದ್ದರು. ಸೆ.12ರಂದು ಪರೀಕ್ಷೆ ನಡೆಯಲಿದ್ದು, ಇದರ ತಯಾರಿಯಲ್ಲಿದ್ದರು.
Next Story





