Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ...

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯನ್ನು ಸಮಾರಂಭಕ್ಕೆ ಬರಬೇಡಿ ಎಂದು ಅವಮಾನ: ಆರೋಪ

ವ್ಯಾಪಕ ಖಂಡನೆಯ ಬಳಿಕ ಶಾಲೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡಿದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ7 Sept 2022 11:50 PM IST
share
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯನ್ನು ಸಮಾರಂಭಕ್ಕೆ ಬರಬೇಡಿ ಎಂದು ಅವಮಾನ: ಆರೋಪ

ಪುತ್ತೂರು, ಸೆ.7: ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದ ಶಿಕ್ಷಕಿಯೊಬ್ಬರನ್ನು ಪ್ರಶಸ್ತಿ ಸ್ವೀಕರಿಸಲು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭಕ್ಕೆ ಬಾರದಂತೆ ತಡೆದಿರುವ ವಿಲಕ್ಷಣ ವಿದ್ಯಮಾನ ಪುತ್ತೂರಿನಲ್ಲಿ ನಡೆದಿರುವುದಾಗಿ ತಡವಾಗಿ ಬೆಳಕಿಗೆ ಬಂದಿದೆ. 

ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ತೆರೇಝ್ ಎಂ. ಸಿಕ್ವೇರ ಅಪಮಾನಕ್ಕೊಳಗಾದ ಶಿಕ್ಷಕಿ.

ಈ ಬಗ್ಗೆ ಟೀಕೆ, ಖಂಡನೆಗಳು ವ್ಯಕ್ತವಾಗುತ್ತಿದ್ದಂತೆಯೇ ಡಿಡಿಪಿಐ ಸುಧಾಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಸಹಿತ ಶಿಕ್ಷಣ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ಮಧ್ಯಾಹ್ನ ಶಾಲೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ. 

ಘಟನೆ ವಿವರ: ತೆರೇಝ್ ಎಂ. ಸಿಕ್ವೇರರಿಗೆ 2021-22ನೇ ಉತ್ತಮ ಶಿಕ್ಷಕಿ ಜಿಲ್ಲಾ ಪ್ರಶಸ್ತಿ ಪ್ರಕಟಗೊಂಡಿತ್ತು. ಆದರೆ ಪ್ರಶಸ್ತಿ ಪ್ರದಾನದ ಹಿಂದಿನ ದಿನ ಪುತ್ತೂರಿನ ಇಬ್ಬರು ಶಿಕ್ಷಕರು ಅವರ ಬಳಿಗೆ ತೆರಳಿ ‘‘ನೀವು ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ಬರಬೇಡಿ. ಸಮಾರಂಭಕ್ಕೆ ಆಗಮಿಸಿ ಪ್ರಶಸ್ತಿ ಸ್ವೀಕರಿಸಿದರೆ ಕೆಲವು ಜನಪ್ರತಿನಿಧಿಗಳು ಸಮಾರಂಭದಿಂದ ಎದ್ದು ಹೋಗುವುದಾಗಿ ಹೇಳಿದ್ದಾರೆ. ಆದ್ದರಿಂದ ನೀವು ಬಂದರೆ ಸಮಾರಂಭ ಹಾಳಾಗುತ್ತದೆ. ನೀವು ಬರುವುದು ಬೇಡ ಇದನ್ನು ತಿಳಿಸಲು ಅಧಿಕಾರಿಗಳು ನಮ್ಮನ್ನು ನಿಮ್ಮಲ್ಲಿಗೆ ಕಳುಹಿಸಿದ್ದಾರೆ’’ ಎಂದು ಹೇಳಿದ್ದರೆನ್ನಲಾಗಿದೆ. ಅದರಂತೆ ಜಿಲ್ಲಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ತೆರೇಝ್ ಗೈರಾಗಿದ್ದರು. ‘ಅನಾರೋಗ್ಯದ ಕಾರಣದಿಂದ ಶಿಕ್ಷಕಿ ತೆರೇಝ್ ಗೈರಾಗಿದ್ದಾರೆ. ಪ್ರಶಸ್ತಿಯನ್ನು ಅವರಿಗೆ ತಲುಪಿಸಲಾಗುವುದು’ ಎಂದು ಸಮಾರಂಭದಲ್ಲಿ ಘೋಷಿಸಲಾಗಿತ್ತು.

ಈ ನಡುವೆ ಶಾಸಕರ ಮೂಲಕ ಅಧಿಕಾರಿಗಳಿಗೆ ಒತ್ತಡ ಹೇರಿ ತೆರೇಝ್ ಪ್ರಶಸ್ತಿ ಸ್ವೀಕರಿಸಲು ಬರದಂತೆ ತಡೆಯಲಾಗಿದೆ. ಅವರಿಗೆ ಅಪಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದರ ವಿರುದ್ಧ ಸಾಕಷ್ಟು ಖಂಡನೆ, ಆಕ್ರೋಶ ಕೇಳಿ ಬಂದಿತ್ತು.

ಶಿಕ್ಷಕಿ ತೆರೇಝ್ ಸಿಕ್ವೇರರನ್ನು ಪ್ರಶಸ್ತಿ ಪಡೆದು ಕೊಳ್ಳಲು ಹೋಗದಂತೆ ತಡೆಯುವ ಮೂಲಕ ಅನ್ಯಾಯ ಮತ್ತು ಅವಮಾನ ಮಾಡ ಲಾಗಿದೆ ಎಂದು ಖಂಡಿಸಿ ಪಾಪೆಮಜಲು ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದರು. ಅಲ್ಲದೆ ಇಲ್ಲಿನ ಪೋಷಕರ ಸಭೆ ನಡೆಸಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪ್ರತಿಭಟನೆ ನಡೆಸುವುದಾಗಿ ಶಾಲಾ ಎಸ್‌ಡಿಎಂಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. 

ಇವೆಲ್ಲಾ ಗೊಂದಲಗಳು ಉಂಟಾಗುತ್ತಿರುವಂತೆಯೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ತೆರಳಿ ತೆರೇಝ್ ಸಿಕ್ವೇರರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

‘‘ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಬಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಹಾಗಾಗಿ ಪ್ರಶಸ್ತಿ ವಿಚಾರದಲ್ಲಿ ಎದುರಾಗಿದ್ದ ಗೊಂದಲಗಳು ಮುಗಿದಿದೆ. ಅಧಿಕಾರಿಗಳು ಬಂದು ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ’’ ಎಂದು ಶಿಕ್ಷಕಿ ತೆರೇಝ್ ಸಿಕ್ವೇರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X