Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆನ್ನುಮೂಳೆ ಮುರಿತಕ್ಕೊಳಗಾದ ಕೂಲಿ...

ಬೆನ್ನುಮೂಳೆ ಮುರಿತಕ್ಕೊಳಗಾದ ಕೂಲಿ ಕಾರ್ಮಿಕ; ಶಸ್ತ್ರಚಿಕಿತ್ಸೆ ನಡೆಸಲು ಒಪ್ಪಿಕೊಂಡ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಬಿಪಿಎಲ್ ಕಾರ್ಡ್‌ಗೆ ಜೋಡಣೆಯಾಗದ ಆಧಾರ್‌ನಿಂದ ಸೃಷ್ಟಿಯಾಗಿದ್ದ ಗೊಂದಲ

ವಾರ್ತಾಭಾರತಿವಾರ್ತಾಭಾರತಿ8 Sept 2022 12:08 AM IST
share
ಬೆನ್ನುಮೂಳೆ ಮುರಿತಕ್ಕೊಳಗಾದ ಕೂಲಿ ಕಾರ್ಮಿಕ; ಶಸ್ತ್ರಚಿಕಿತ್ಸೆ ನಡೆಸಲು ಒಪ್ಪಿಕೊಂಡ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಮಂಗಳೂರು, ಸೆ.7: ಮರದ ರೆಂಬೆ ಕಡಿಯುವ ವೇಳೆ ಬಿದ್ದು ಬೆನ್ನು ಮೂಳೆಯ ಮುರಿತಕ್ಕೆ ಒಳಗಾಗಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ದಿನಗಳಿಂದ ಉಚಿತ ಶಸ್ತ್ರಚಿಕಿತ್ಸೆಗಾಗಿ ಕಾಯುತ್ತಿದ್ದ ಮೂಡಿಗೆರೆ ತಾಲೂಕಿನ ಕೃಷಿ ಕೂಲಿ ಕಾರ್ಮಿಕ, ಆದಿವಾಸಿ ಮಲೆಕುಡಿಯ ಜನಾಂಗದ ಶ್ರೀನಿವಾಸ (35) ಅವರ ಪರವಾಗಿ ‘ಡಿವೈಎಫ್‌ಐ’ ಸಂಘಟನೆಯು ನಡೆಸಿದ ಪ್ರಯತ್ನಕ್ಕೆ ಪ್ರಥಮ ಹಂತದ ಯಶಸ್ಸು ಸಿಕ್ಕಿದೆ.

ಶ್ರೀನಿವಾಸ ಅವರ ಕುಟುಂಬವು ಬಿಪಿಎಲ್ ಕಾರ್ಡ್ ಹೊಂದಿದೆ. ಆದರೆ ಆಧಾರ್ ಜೋಡಣೆಗೆ ಸಂಬಂಧಿಸಿದ ತಾಂತ್ರಿಕ ಅಡಚಣೆಯಿಂದಾಗಿ ಶ್ರೀನಿವಾಸರ ಹೆಸರು ಕೈ ತಪ್ಪಿತ್ತು. ಇದರಿಂದ ತಾಂತ್ರಿಕ ಸಮಸ್ಯೆಯೂ ಸೃಷ್ಟಿಯಾಗಿತ್ತು. ಬಿಪಿಎಲ್ ಕಾರ್ಡ್‌ನಲ್ಲಿ ಶ್ರೀನಿವಾಸರ ಹೆಸರಿಲ್ಲದ ಕಾರಣಕ್ಕೆ ವೆನ್ಲಾಕ್ ಆಸ್ಪತ್ರೆಯ ವೈದ್ಯರು ಉಚಿತ ಶಸ್ತ್ರಚಿಕಿತ್ಸೆಗೆ ನಿರಾಕರಿಸಿದ್ದರು.

ಇದೀಗ ಆ ಗೊಂದಲ ನಿವಾರಣೆಯಾಗಿದ್ದು, ವೆನ್ಲಾಕ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನಡೆಸಲು ಒಪ್ಪಿಕೊಂಡಿದ್ದಾರೆ. ಅದರಂತೆ ಸೆ.10ರಂದು ಚಿಕಿತ್ಸೆ ನಡೆಯಲಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ 72 ಸಾವಿರ ರೂ. ವೆಚ್ಚವಾಗುತ್ತದೆ. ಬಿಪಿಎಲ್ ಕಾರ್ಡ್‌ನಲ್ಲಿ ಹೆಸರಿಲ್ಲದ ಕಾರಣ ಎಪಿಎಲ್ ಕಾರ್ಡ್ ಆಧಾರದಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಒಟ್ಟು ಮೊತ್ತದ ಶೇ 70ರಷ್ಟು ವೆಚ್ಚ ಭರಿಸಬೇಕು ಎಂದು ಆಸ್ಪತ್ರೆ ವೈದ್ಯರು ಶ್ರೀನಿವಾಸರಿಗೆ ತಿಳಿಸಿದ್ದರು.  ಅಷ್ಟು ಹಣವು ಕೃಷಿಕೂಲಿ ಕಾರ್ಮಿಕ ಶ್ರೀನಿವಾಸರ ಬಳಿ ಇಲ್ಲದ ಕಾರಣ ಮಾಹಿತಿ ಪಡೆದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮತ್ತಿತರರು ಮಧ್ಯಪ್ರವೇಶಿಸಿ ವೈದ್ಯರ ಜೊತೆ ಮಾತುಕತೆ ನಡೆಸಿದ್ದರು. ಆರಂಭದಲ್ಲಿ ಉಚಿತ ಶಸ್ತ್ರಚಿಕಿತ್ಸೆ ನಡೆಸಲು ವೆನ್ಲಾಕ್ ವೈದ್ಯರು ನಿರಾಕರಿಸಿದರೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಲೇ ವೈದ್ಯರು ಎಚ್ಚೆತ್ತುಕೊಂಡರು.

ಈ ಮಧ್ಯೆ ಡಿವೈಎಫ್‌ಐ ಸಂಘಟನೆಯ ಸಹಕಾರದೊಂದಿಗೆ ಬಿಪಿಎಲ್-ಆಧಾರ್ ಕಾರ್ಡ್‌ನ ತಾಂತ್ರಿಕ ಲೋಪವನ್ನು ಸರಿಪಡಿಸಿ ಬಿಪಿಎಲ್ ಕಾರ್ಡ್‌ನ ಪ್ರತಿಯನ್ನು ಆಸ್ಪತ್ರೆಗೆ ಒಪ್ಪಿಸಿದ್ದರು.

ಅವಿವಾಹಿತರಾದ ಶ್ರೀನಿವಾಸ ತನ್ನ ಕುಟುಂಬಕ್ಕೆ ಆಧಾರವಾಗಿದ್ದರು. ಆ.11ರಂದು ಕೃಷಿ ಕೂಲಿ ಕೆಲಸದ ವೇಳೆ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿದ್ದರು. ಶ್ರೀನಿವಾಸರ ತಂದೆಗೆ ವಯಸ್ಸಾಗಿದ್ದು, ದುಡಿಯುವ ಸ್ಥಿತಿಯಲ್ಲಿಲ್ಲ. ಅಣ್ಣ ಅಂಗವಿಕಲನಾಗಿದ್ದು, ತಾಯಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಆಸುಪಾಸಿನವರು, ಸಂಬಂಧಿಕರು ಆ.12ರಂದು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಉಚಿತ ಚಿಕಿತ್ಸೆಗಾಗಿ ಪ್ರಯತ್ನ ಸಾಗಿಸಿದ್ದರು. ಫಲ ಸಿಗದಿದ್ದಾಗ ಶೃಂಗೇರಿಯ ಸಾಮಾಜಿಕ ಕಾರ್ಯಕರ್ತ ಮಣಿಶೇಖರ್ ಅವರು ಡಿವೈಎಫ್‌ಐ ಸಂಘಟನೆಯನ್ನು ಸಂಪರ್ಕಿಸಿದ್ದರು.

*ಶ್ರೀನಿವಾಸ ವೆನ್ಲಾಕ್‌ನಲ್ಲಿ ಮಲಗಿ 25 ದಿನಗಳಾಗಿವೆ. ಆದರೆ ತಾಂತ್ರಿಕ ನೆಪವೊಡ್ಡಿ ಉಚಿತ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಿರಲಿಲ್ಲ. ನಮ್ಮ ಮಧ್ಯಪ್ರವೇಶದ ಬಳಿಕ ಇದೀಗ ಎಚ್ಚೆತ್ತುಕೊಂಡಿದ್ದಾರೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

*ಬೆನ್ನುಮೂಳೆ ಮುರಿತಕ್ಕೊಳಗಾದ ಶ್ರೀನಿವಾಸ ಕುಟುಂಬಸ್ಥರು ಇದೀಗ ಬಿಪಿಎಲ್ ಕಾರ್ಡ್ ನೀಡಿದ್ದಾರೆ. ಹಾಗಾಗಿ ಸೆ.10ರಂದು ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಸದಾಶಿವ ಶ್ಯಾನುಭಾಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X