ಬೆಂಗಳೂರು: ಮಳೆಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು: ನಿರಂತರ ಮಳೆಯಿಂದ ಜಲಾವೃತವಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿದರು.
ಮಳೆಯಿಂದ ಜಲಾವೃತವಾಗಿರುವ ಬೆಂಗಳೂರಿನ ಬೆಳ್ಳಂದೂರು ರಿಂಗ್ ರಸ್ತೆಯ ಎಕೋ ಸ್ಪೇಸ್ ಬಡಾವಣೆ, ಯಮಲೂರು ಇಪ್ಸಿಲಾನ್ ಬಡಾವಣೆ, , ರೈನ್ ಬೋ ಬಡಾವಣೆ ಮುಂತಾದ ಸ್ಥಳಗಳಿಗೆ ಅವರು ಭೇಟಿ ನೀಡಿದರು.
ಇತ್ತೀಚೆಗೆ ಸಿದ್ದಾಪುರದಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿರುವ ಯುವತಿ ಅಖಿಲಾ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು.






.jpeg)


.jpeg)

