Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶವನ್ನು 3 ತುಂಡು ಮಾಡಿದವರಿಂದ ಈಗ ಜೋಡೋ...

ದೇಶವನ್ನು 3 ತುಂಡು ಮಾಡಿದವರಿಂದ ಈಗ ಜೋಡೋ ಯಾತ್ರೆ ಶುರುವಾಗಿದೆ: ಈಶ್ವರಪ್ಪ ಟೀಕೆ

ವಾರ್ತಾಭಾರತಿವಾರ್ತಾಭಾರತಿ8 Sept 2022 4:41 PM IST
share
ದೇಶವನ್ನು 3 ತುಂಡು ಮಾಡಿದವರಿಂದ ಈಗ ಜೋಡೋ ಯಾತ್ರೆ ಶುರುವಾಗಿದೆ: ಈಶ್ವರಪ್ಪ ಟೀಕೆ

ಶಿವಮೊಗ್ಗ, ಸೆ.08: 'ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು' ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್'  ಎಂದು ಹೇಳಿದರು.

'ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ ಭಾರತ್ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿರುವುದು ನಿಜಕ್ಕೂ ಸಂತೋಷ ಎಂದ ಅವರು,ಈ ದೇಶಕ್ಕಾಗಿ ಬಲಿದಾನ ಮಾಡಿದವರಿಗೆ ಕಾಂಗ್ರೆಸ್ ಮೇಲೆ ಸಿಟ್ಟಿದೆ. ಕಾಂಗ್ರೆಸ್ ಪಕ್ಷ ನಾಶ ಆಗಬೇಕು ಎಂದು ಅವರು ಶಾಪ ಹಾಕಿದ್ದಾರೆ. ಅವರ ಶಾಪದಂತೆ ನಾಶವೂ ಆಗುತ್ತಿದೆ. ಆದರೂ ಅಲ್ಲೊಂದು ಚೂರು ಇಲ್ಲೊಂದು ಚೂರು ಎಂಬಂತೆ ಉಳಿದಿರುವ ಕಾಂಗ್ರೆಸ್ ಭಾರತವನ್ನು ಮತ್ತೆ ಜೋಡಿಸಲು ಹೊರಟಿದ್ದು ಒಳ್ಳೆಯದೇ' ಎಂದರು.

'ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಹೆಸರಿನಲ್ಲಿ ಅಖಂಡ ಭಾರತ ನಿರ್ಮಾಣಕ್ಕೆ ಹೊರಟಿದ್ದೇವೆ ಎಂದು ಅವರು ಹೇಳಬೇಕು. ಪಾಕಿಸ್ತಾನವನ್ನು ವಾಪಸ್ ತರುತ್ತೇವೆ, ಬಾಂಗ್ಲಾದೇಶವನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ರಾಹುಲ್ ತಿಳಿಸಬೇಕು. ಆಗ ಮಾತ್ರ ಇದು ನಿಜವಾದ ಭಾರತ್ ಜೋಡೋ ಯಾತ್ರೆಯಾಗುತ್ತದೆ'  ಎಂದರು.

'ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಾ? ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕ ಗಾಂಧಿ, ರಾಬರ್ಟ್ ವಾದ್ರಾ ಅವರದ್ದೆಲ್ಲ ಫೋಟೊ ಹಾಕಿಕೊಂಡಿದ್ದಾರೆ. ಪಾಪ ಅವರೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರ ಎಂದು ಪ್ರಶ್ನಿಸಿದ ಈಶ್ವರಪ್ಪ, ರಾಬರ್ಟ್ ವಾದ್ರಾ ಅಂತೂ ದೇಶಕ್ಕಾಗಿ ಎಷ್ಟು ಬಲಿದಾನ ಮಾಡಿದ್ದಾನೆ ಎಂದು ದೇಶಕ್ಕೆ ಗೊತ್ತಾಗಿದೆ. ಆ ಕುಟುಂಬದ ಬಗ್ಗೆ ಮಾತನಾಡಿ ಸಾಕಾಗಿದೆ '  ಎಂದು ಹೇಳಿದರು.

'ದೇಶದ ಸ್ವಾತಂತ್ರ್ಯಕ್ಕಾಗಿ ಆ ಬಲಿದಾನ ಮಾಡಿದ್ದಾರಲ್ಲ ಅವರ ಪ್ರಾಣಕ್ಕೆ ಬೆಲೆ ಇಲ್ವ. ಅಧಿಕಾರಕ್ಕಾಗಿ ದೇಶವನ್ನುಮೂರು ತುಂಡು ಮಾಡಿದರಲ್ಲ ಕಾಂಗ್ರೆಸ್‌ನವರು.ಅವರೆಲ್ಲರ ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರ ಕೊಡುತ್ತಾರೆಯೇ?' ಎಂದು ಈಶ್ವರಪ್ಪ ಪ್ರಶ್ನಿಸಿದರು.

'ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ ಮತ್ತು ಹೆಸರು ಬದಲಾವಣೆ ವಿಷಯದ ಬಗ್ಗೆ ಉತ್ತರಿಸಿದ ಅವರು, ಮೊದಲು ಪ್ಲಾನ್ ಮಾಡಿದಾಗ ವರ್ಷದ ಕಾರ್ಯಕ್ರಮ ಆಗಿತ್ತು. ಅದಕ್ಕಾಗಿ ಜನೋತ್ಸವ ಅಂತ ಹೆಸರಿಟ್ಟಿದ್ದೆವು. ಈಗ ಒಂದು ವರ್ಷ ಕಳೆದು ಮುಂದೆ ಹೋಗುತ್ತಿರುವುದರಿಂದ ಅದೇ ಹೆಸರು ಇಟ್ಟರೆ ಸರಿಹೊಂದುವುದಿಲ್ಲ. ಹೀಗಾಗಿ ಜನ ಸ್ಪಂದನ ಕಾರ್ಯಕ್ರಮ ಎಂದು ಹೆಸರಿಟ್ಟಿದೇವೆ' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X