Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಪೂರ್ಣ ಕಾಮಗಾರಿ, ಯೋಜನೆಗಳು...

ಅಪೂರ್ಣ ಕಾಮಗಾರಿ, ಯೋಜನೆಗಳು ಪೂರ್ಣಗೊಳಿಸಲು ಆದ್ಯತೆ: ನೂತನ ಮೇಯರ್ ಜಯಾನಂದ ಅಂಚನ್‌

ವಾರ್ತಾಭಾರತಿವಾರ್ತಾಭಾರತಿ9 Sept 2022 2:51 PM IST
share
ಅಪೂರ್ಣ ಕಾಮಗಾರಿ, ಯೋಜನೆಗಳು ಪೂರ್ಣಗೊಳಿಸಲು ಆದ್ಯತೆ: ನೂತನ ಮೇಯರ್ ಜಯಾನಂದ ಅಂಚನ್‌

ಮಂಗಳೂರು, ಸೆ.9: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಜಲಸಿರಿ, ಗೇಲ್ ಪೈಪ್‌ಲೈನ್, ರಸ್ತೆ ಕಾಮಗಾರಿಗಳು ಸೇರಿದಂತೆ ಅಪೂರ್ಣವಾಗಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಿಸಲು ನನ್ನ ಅವಧಿಯಲ್ಲಿ ಆದ್ಯತೆ ನೀಡಲಾಗುವುದು ಎಂದು ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.

ಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಆಯ್ಕೆಯಾದ ಅವರು ಸುದ್ದಿಗಾರರ ಜತೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಇದನ್ನೂ ಓದಿ: ಮಂಗಳೂರು ಮನಪಾ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಆಯ್ಕೆ

ಪಕ್ಷದ ಹಿರಿಯ ಸದಸ್ಯರು, ಮೇಯರ್‌ಗಳ ಮಾರ್ಗದರ್ಶನ, ಪಕ್ಷ ಹಾಗೂ ಪ್ರತಿಪಕ್ಷದ ನಾಯಕರು, ಸದಸ್ಯರ ಸಲಹೆಯ ಮೇರೆಗೆ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜತೆಗೆ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ಗಮನ ಹರಿಸುತ್ತೇನೆ ಎಂದವರು ನುಡಿದರು.

ಮೇಯರ್ ಜತೆ ಸೇರಿ ಅಭಿವೃದ್ಧಿ ಕಾರ್ಯಕ್ಕೆ ಒತ್ತು: ಪೂರ್ಣಿಮಾ

ಮೇಯರ್ ಜತೆ ಸೇರಿಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಪಾಲಿಕೆಯ ಅಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡುವುದಾಗಿ ನೂತನ ಉಪ ಮೇಯರ್ ಪೂರ್ಣಿಮಾ ಹೇಳಿದರು.

ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿರುವ 39ರ ಹರೆಯದ ಪೂರ್ಣಿಮಾ ಪಾಲಿಕೆಯಲ್ಲಿ ಎರಡನೆ ಅವಧಿಗೆ ಸದಸ್ಯರಾಗಿದ್ದಾರೆ. ಇದೀಗ ಮಹಾನಗರ ಪಾಲಿಕೆಯ 23ನೇ ಅವಧಿಯ ಉಪ ಮೇಯರ್ ಆಗಿ ಚುನಾವಣೆಯಲ್ಲಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

ಮೈಸೂರು ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ನೇತೃತ್ವದಲ್ಲಿ ಪಾಲಿಕೆ ಸಭಾಂಗಣದಲ್ಲಿ ಮೇಯರ್, ಉಪ ಮೇಯರ್ ಹಾಗೂ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆ ಬಳಿಕ ನೂತನ ಮೇಯರ್ ಹಾಗೂ ಉಪ ಮೇಯರ್‌ಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಮಾಜಿ ಮೇಯರ್‌ಗಳು, ಪಾಲಿಕೆಯ ಸದಸ್ಯರು ನೂತನ ಮೇಯರ್ ಹಾಗೂ ಉಪ ಮೇಯರ್‌ಗೆ ಹೂಮಾಲೆ ಅರ್ಪಿಸಿ, ನುಡಿನಮನಗಳ ಮೂಲಕ ಅಭಿನಂದನೆ ಸಲ್ಲಿಸಿದರು.

 ಮೇಯರ್ ಜಯಾನಂದ್ ಪರಿಚಯ:
ಕದ್ರಿ (ಪದವು) ವಾರ್ಡ್‌ನ ಸದಸ್ಯರಾದ 55ರ ಹರೆಯದ ಜಯಾನಂದ್ ಅಂಚನ್ ವೃತ್ತಿಯಲ್ಲಿ ಉದ್ಯಮಿಯಾಗಿದ್ದಾರೆ. ಕೆಪಿಟಿಯಲ್ಲಿ ಐಟಿಐ (ಇಲೆಕ್ಟ್ರಾನಿಕ್ಸ್) ಡಿಪ್ಲೊಮಾ ಪಡೆದಿರುವ ಇವರ ಪತ್ನಿ ವೇದಶ್ರೀ ಗೃಹಿಣಿಯಾಗಿದ್ದಾರೆ. ಹಿಂದೆ ಬಿಜೆಪಿ ವಾರ್ಡ್ ಅಧ್ಯಕ್ಷನಾಗಿಯೂ ಕಾರ್ಯ ನಿರ್ವಹಿಸಿರುವ ಜಯಾನಂದ ಅಂಚನ್ ಪಾಲಿಕೆಯಲ್ಲಿ ಪ್ರಸಕ್ತ ದ್ವಿತೀಯ ಅವಧಿಗೆ ಸದಸ್ಯರಾಗಿದ್ದಾರೆ. ಸತತ ಮೂರು ಬಾರಿ ಪಾಲಿಕೆ ಸದಸ್ಯರಾಗಿ ಚುನಾವಣೆ ಎದುರಿಸಿರುವ ಜಯಾನಂದ ಅಂಚನ್, ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X