ಸುಳ್ಯ: ಮದರಸದಿಂದ ಹಿಂತಿರುಗುತ್ತಿದ್ದ ವೇಳೆ ಬೈಕ್ ಢಿಕ್ಕಿ; ಬಾಲಕಿ ಮೃತ್ಯು

ರಿಫಾ - ಮೃತ ಬಾಲಕಿ
ಸುಳ್ಯ: ಮದರಸದಿಂದ ತರಗತಿ ಮುಗಿಸಿಕೊಂಡು ಮನೆಗೆ ಬರಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕು ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ವರದಿಯಾಗಿದೆ.
ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ಆಯಿಷಾ ರಿಫಾ (6 )ಮೃತಪಟ್ಟ ಬಾಲಕಿ ಎಂದು ತಿಳಿದು ಬಂದಿದೆ.
ಇಂದು (ಶನಿವಾರ) ಬೆಳಗ್ಗೆ ಮದರಸದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕೊಂದು ಬಾಲಕಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಬಾಲಕಿ ಮೃತಟ್ಟಿರುವುದಾಗಿ ತಿಳಿದು ಬಂದಿದೆ.
Next Story