ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆಯಾಗಿದ್ದಾರೆ: ಕಾಂಗ್ರೆಸ್
ವೇದಿಕೆಯಲ್ಲಿ ಕುಣಿದಾಡುವ ಸಚಿವರು, ಶಾಸಕರ ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್

ಬೆಂಗಳೂರು: 'ರಾಜ್ಯದಲ್ಲಿ ಮಳೆಯ ರುದ್ರನರ್ತನೆ, ಸಂತ್ರಸ್ತರ ನೋವಿನ ರೋಧನೆ, ಬಿಜೆಪಿಯದ್ದು ಮೋಜಿನ ನರ್ತನೆ. ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆಯಾಗಿದ್ದಾರೆ' ಎಂದು ಕಾಂಗ್ರೆಸ್ ಟೀಕೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಅತ್ತ ಜನತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಇತ್ತ ಬಿಜೆಪಿ ಸರ್ಕಾರ ಸಂಭ್ರಮಾಚರಣೆಯಲ್ಲಿದೆ. ಇದು ಲಜ್ಜೆಗೇಡಿತನದ ಪರಮಾವಧಿ' ಎಂದು ಕಾಂಗ್ರೆಸ್ ಹೇಳಿದೆ.
ಇನ್ನು ದೊಡ್ಡಬಳ್ಳಾಪುರದ ಬಿಜೆಪಿಯ 'ಜನಸ್ಪಂದನ' ಸಮಾವೇಶದಲ್ಲಿ ನೃತ್ಯ ಮಾಡುತ್ತಿರುವ ಶಾಸಕರು ಹಾಗೂ ಸಚಿವರ ವಿಡಿಯೋ ಒಂದನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ.
'ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ?, ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ?, ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ? , ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ?, 40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ?' ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿ ಮಳೆಯ ರುದ್ರನರ್ತನೆ,
— Karnataka Congress (@INCKarnataka) September 10, 2022
ಸಂತ್ರಸ್ತರ ನೋವಿನ ರೋಧನೆ,
ಬಿಜೆಪಿಯದ್ದು ಮೋಜಿನ ನರ್ತನೆ.
ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ!
ಅತ್ತ ಜನತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಇತ್ತ ಸಂಭ್ರಮಾಚರಣೆಯಲ್ಲಿದೆ @BJP4Karnataka ಸರ್ಕಾರ.
ಇದು ಲಜ್ಜೆಗೇಡಿತನದ ಪರಮಾವಧಿ.#BJPBrashtotsava pic.twitter.com/dN0g2avXbV







