ಸುಳ್ಯ; ಬಿಸಿಯೂಟದ ಸಿಬ್ಬಂದಿ ಮಹಿಳೆಗೆ ಹಲ್ಲೆ: ಆರೋಪಿ ಸುರೇಂದ್ರ ಪರಾರಿ

ಸುಳ್ಯ: ತೊಡಿಕಾನ ಗ್ರಾಮದ ಕಲ್ಲಂಬಳ ಎಂಬಲ್ಲಿ ಯುವಕನೋರ್ವ ಮಹಿಳೆಗೆ ಕತ್ತಿಯಿಂದ ಕಡಿದಿದ್ದು, ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ಯುವಕ ತಲೆಮರೆಸಿಕೊಂಡಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಎಂಬವರು ತೊಡಿಕಾನ ಶಾಲೆಯಲ್ಲಿ ಬಿಸಿಯೂಟದ ಸಿಬ್ಬಂದಿಯಾಗಿದ್ದು, ಶುಕ್ರವಾರ ಸಂಜೆ ಮನೆಗೆ ಹೋಗುತ್ತಿದ್ದ ವೇಳೆ ಕಲ್ಲಂಬಳ ಬಸ್ ನಿಲ್ದಾಣದ ಬಳಿ ಕಾದು ಕುಳಿತಿದ್ದ ಸುರೇಂದ್ರ ಎಂಬಾತ ಕತ್ತಿಯಿಂದ ಕಡಿದಿದ್ದಾನೆ ಎಂದು ತಿಳಿದುಬಂದಿದೆ.
ಸುರೇಂದ್ರ ಹಾಗೂ ಆತನ ತಂದೆ ಕರುಣಾಕರ ಎಂಬವರ ವಿರುದ್ಧ ದೂರು ನೀಡಲಾಗಿದ್ದು, ಇಬ್ಬರೂ ತಲೆಮರೆಸಿಕೊಂಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story