ಸೆ.13ರಂದು ಆಸ್ಕರ್ ಫೆರ್ನಾಂಡಿಸ್ ಪ್ರತಿಮೆ ಅನಾವರಣ

ಆಸ್ಕರ್ ಫೆರ್ನಾಂಡಿಸ್
ಉಡುಪಿ, ಸೆ.11: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ವರ್ಷದ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆ ಅನಾವರಣ ಸೆ.13ರಂದು ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಭವನದ ಆವರಣದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಭಾಷಣ, ರಸಪ್ರಶ್ನೆ ಸ್ಪರ್ಧೆ ಮತ್ತು ಸಂಸ್ಮರಣಾ ಸಭಾ ಕಾರ್ಯಕ್ರಮ ಜರಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





