ಥ್ರೋಬಾಲ್: ಸುಜೀರ್ ಸರಕಾರಿ ಶಾಲಾ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ, ಸೆ.12: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಮಣಿನಾಲ್ಕೂರು ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ 17ರ ವಯೋಮಾನದ ಒಳಗಿನ ಬಾಲಕರ ವಿಭಾಗದಲ್ಲಿ ಸುಜೀರು ಸರಕಾರಿ ಪ್ರೌಢ ಶಾಲೆಯ ತಂಡ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ತಂಡಕ್ಕೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉಮರ್ ಫಾರೂಕ್, ಶಾಲಾ ಮುಖ್ಯ ಶಿಕ್ಷಕಿ ಶಶಿ ಮಂಗಳ ವೈ., ಮಜೀದ್ ಫರಂಗಿಪೇಟೆ ಹಾಗೂ ಶಾಲಾ ಶಿಕ್ಷಕರು ಶಿಕ್ಷಕಿಯೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.
Next Story