ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

ಹೊಸದಿಲ್ಲಿ: ಮುಂಬರುವ ಟಿ20 ವಿಶ್ವಕಪ್(T20 World Cup) ಗೆ ಭಾರತ(India) ತಂಡ ಸೋಮವಾರ ಪ್ರಕಟವಾಗಿದ್ದು, ಬಹುತೇಕ ಏಶ್ಯಕಪ್ ತಂಡದಲ್ಲಿದ್ದವರಿಗೆ ಅವಕಾಶ ಸಿಕ್ಕಿದೆ. ಗಾಯದಿಂದ ಹೊರಬಿದ್ದ ರವೀಂದ್ರ ಜಡೇಜ ಅವರ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಮತ್ತೆ ತಂಡಕ್ಕೆ ವಾಪಸಾಗಿದ್ದಾರೆ. ಮೊದಲ ಬಾರಿಗೆ ಟಿ20 ವಿಶ್ವಕಪ್ ನಲ್ಲಿ ನಾಯಕನಾಗಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಅವರು ಉಪನಾಯಕನಾಗಿ ಮುಂದುವರೆಯಲಿದ್ದಾರೆ.
ಟಾಪ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಸಹಿತ ದೀಪಕ್ ಹೂಡ ಅವರೂ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಸ್ಪಿನ್ ಬೌಲರ್ ಗಳಾದ ಯಜುವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿದ್ದು, ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಅರ್ಶದೀಪ್ ಸಿಂಗ್ ಅವರನ್ನು ಆಯ್ಕೆಮಾಡಲಾಗಿದೆ.
ವೇಗಿ ಮೊಹಮ್ಮದ್ ಶಮಿ, ಬ್ಯಾಟರ್ ಶ್ರೇಯಸ್ ಅಯ್ಯರ್, ಆಲ್ ರೌಂಡರ್ ದೀಪಕ್ ಚಾಹರ್ ಮತ್ತು ಸ್ಪಿನ್ ಬೌಲರ್ ರವಿ ಬಿಷ್ಣೋಯ್ ಅವರನ್ನು ಮೀಸಲು ಆಟಗಾರರಾಗಿದ್ದಾರೆ.
ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶದೀಪ್ ಸಿಂಗ್.
ಮೀಸಲು ಆಟಗಾರರು- ಮುಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಾಹರ್.







