2,500 ಶಿಕ್ಷಕರ ನೇಮಕ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: 'ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ' ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳು' ಖಾಲಿ ಇದ್ದು, ಶೀಘ್ರ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
— B.C Nagesh (@BCNagesh_bjp) September 12, 2022
ಸಹ ಶಿಕ್ಷಕರು - 2,200 ಹುದ್ದೆಗಳು.
ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು.
ವಿಶೇಷ ಶಿಕ್ಷಕರು - 100 ಹುದ್ದೆಗಳು.@BSBommai @BJP4Karnataka
Next Story





