ಬಿಸಿರೋಡ್; ಚಂಡಿಕಾಪರಮೇಶ್ವರಿ ದೇವೀ ದೇವಸ್ಥಾನದ ಬ್ರಹ್ಮಕಲಶದ ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ, ಸೆ.12: ಧನಾತ್ಮಕ ಪರಿಣಾಮ ಬೀರುವ ರೀತಿಯಲ್ಲಿ ದೇವಸ್ಥಾನದ ವಿನ್ಯಾಸಗಳು ರೂಪುಗೊಂಡಾಗ ದೇವಾಲಯಕ್ಕೆ ಬರುವ ಭಕ್ತರಿಗೆ ಶ್ರೀರಕ್ಷೆಯಾಗಲಿದೆ ಎಂದು ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ಹೇಳಿದರು.
ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವೀ ದೇವಸ್ಥಾನದಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕಲಶದ ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಾಲಯದ ನವೀಕರಣ ಕಾರ್ಯ ಹಾಗೂ ಶ್ರೀ ಚಂಡಿಕಾಪರಮೇಶ್ವರಿ ದೇವಿಯ ಬ್ರಹ್ಮಕಲಶೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲು ಬೇಕಾದ ಸಕಲ ವ್ಯವಸ್ಥೆಗೆ ಎಲ್ಲರ ಸಹಕಾರ ಇರಲಿ ಎಂದು ಅವರು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ದೇವರ ಆಶ್ರೀರ್ವಾದ, ಅನುಗ್ರಹದ ಮೂಲಕ ಮಾತ್ರ ಮನುಷ್ಯ ಎತ್ತರಕ್ಕೆ ಬೆಳೆಯುತ್ತಾನೆ. ಜೀರ್ಣೋದ್ಧಾರ ಕಾರ್ಯವನ್ನು ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಎಲ್ಲರೂ ಒಟ್ಟಾಗಿ ಸೇರಿ ದೇವಾಲಯಗಳ ಜೀರ್ಣೋದ್ಧಾರ ಕಾರ್ಯದಲ್ಲಿ ಕೈ ಜೋಡಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ವಾಗುತ್ತದೆ ಎಂದು ಅವರು ಹೇಳಿದರು.
ಉದ್ಯಮಿ ರಘನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಉದ್ಯಮಿ ರಾಕೇಶ್ ಮಲ್ಲಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಕಾರ್ಯದರ್ಶಿ ಇಂದ್ರೇಶ್, ಪ್ರಮುಖ ಮಾರ್ಗದರ್ಶಕರಾದ ಸದಾನಂದ ಶೆಟ್ಟಿ ರಂಗೋಲಿ, ಕೃಷ್ಣಪ್ಪ ಕುಲಾಲ್, ಪ್ರಮುಖರಾದ ಸತೀಶ ಶೆಟ್ಟಿ ಕುಳತ್ರಬೆಟ್ಟು, ಬಿ.ಮೋಹನ್, ಚರಣ್ ಜುಮಾದಿಗುಡ್ಡೆ, ಬಾಬಾ ಅಲೆತ್ತೂರು, ರಮೇಶ್ ಶೆಣೈ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ಗೋಪಾಲ ಸುರ್ವಣ, ಬಾಸ್ಕರ ಟೈಲರ್ ಬಿ.ಸಿ.ರೋಡು, ಸೋಮನಾಥ ನಾಯ್ಡು, ಮಹಾಬಲೇಶ್ವರ ಹೆಬ್ಬಾರ್, ನೀಲೋಜಿ ರಾವ್, ಪ್ರಶಾಂತ್ ಬಿ.ಸಿ.ರೋಡು ಮತ್ತಿತರರು ಉಪಸ್ಥಿತರಿದ್ದರು.
ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ಟರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ಸ್ವಾಗತಿಸಿ ದರು. ಕಲಾವಿದ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.







