Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿರಾರು ಕೋಟಿ ರೂ. ಆಸ್ತಿ ನುಂಗಲು...

ಸಾವಿರಾರು ಕೋಟಿ ರೂ. ಆಸ್ತಿ ನುಂಗಲು ಸರಕಾರದಿಂದಲೇ ಕುಮ್ಮಕ್ಕು: ಎಚ್.ಡಿ.ಕುಮಾರಸ್ವಾಮಿ

''ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ''

ವಾರ್ತಾಭಾರತಿವಾರ್ತಾಭಾರತಿ12 Sept 2022 11:08 PM IST
share
ಸಾವಿರಾರು ಕೋಟಿ ರೂ. ಆಸ್ತಿ ನುಂಗಲು ಸರಕಾರದಿಂದಲೇ ಕುಮ್ಮಕ್ಕು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಸೆ.12: ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ದಾಖಲೆಗಳನ್ನು ಕೊಡಿ ಎಂದು ಪದೇಪದೆ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಗುಡುಗಿದರು.

ನಾನು ಸುಖಾಸುಮ್ಮನೆ ಸದನದ ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಶಾಸಕಾಂಗ ಸಭೆಯಲ್ಲಿಯೂ ಈ ವಿಷಯ ಸೇರಿ ಹಲವಾರು ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದರು.

ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು. 

ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ತೃತೀಯ ರಂಗವಲ್ಲ, ಪರ್ಯಾಯ ಶಕ್ತಿ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ತೃತೀಯ ರಂಗ ಅನ್ನೋದು ಪ್ರಶ್ನೆ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯ ಕನಸು ಅವರದ್ದು ಎಂದರು.

ಕೆಸಿಆರ್ ಅವರು ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯ ಆಗಬೇಕು, ರಾಷ್ಟ್ರ ಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜೊತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X