ಸಿಎಎ ಪ್ರಶ್ನಿಸಿ ಸಲ್ಲಿಸಿದ ಮನವಿಗಳ ವಿಚಾರಣೆ ಸೆ. 19ಕ್ಕೆ ಮುಂದೂಡಿಕೆ
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಮನವಿಗಳ ಗುಚ್ಛದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಸೆಪ್ಟಂಬರ್ 19ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಹಾಗೂ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಕನಿಷ್ಠ 220 ಮನವಿಗಳ ವಿಚಾರಣೆ ನಡೆಸುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಮನವಿಗಳ ಮೊದಲ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ 2019 ಡಿಸೆಂಬರ್ 18ರಂದು ನಡೆದಿತ್ತು.
Next Story