Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಎರಡನೇ ಅಲೆಯ ವೇಳೆ 'ಅಕ್ಸಿಜನ್...

ಕೋವಿಡ್ ಎರಡನೇ ಅಲೆಯ ವೇಳೆ 'ಅಕ್ಸಿಜನ್ ಕೊರತೆಯಿಂದ' ಉಂಟಾದ ಸಾವುಗಳ ಆಡಿಟ್ ನಡೆಸಬೇಕು: ಸಂಸದೀಯ ಸ್ಥಾಯಿ ಸಮಿತಿ

ವಾರ್ತಾಭಾರತಿವಾರ್ತಾಭಾರತಿ13 Sept 2022 4:41 PM IST
share
ಕೋವಿಡ್ ಎರಡನೇ ಅಲೆಯ ವೇಳೆ ಅಕ್ಸಿಜನ್ ಕೊರತೆಯಿಂದ ಉಂಟಾದ ಸಾವುಗಳ ಆಡಿಟ್ ನಡೆಸಬೇಕು: ಸಂಸದೀಯ ಸ್ಥಾಯಿ ಸಮಿತಿ

ಹೊಸದಿಲ್ಲಿ : ಪ್ರಮುಖವಾಗಿ ದೇಶದಲ್ಲಿ ಕೋವಿಡ್ ಎರಡನೇ ಅಲೆ ಸಂದರ್ಭ 'ಆಕ್ಸಿಜನ್ ಕೊರತೆಯಿಂದ ಉಂಟಾದ ಸಾವುಗಳಿಗೆ' (Oxygen Shortage) ಸಂಬಂಧಿಸಿದಂತೆ ಸರಕಾರ ಆಡಿಟ್(Audit) ನಡೆಸಬೇಕೆಂದು ಸಂಸದೀಯ ಆರೋಗ್ಯ ಸ್ಥಾಯಿ ಸಮಿತಿಯು ಸೋಮವಾರ ರಾಜ್ಯಸಭೆಯಲ್ಲಿ(Rajyasabha) ಮಂಡಿಸಿದ ತನ್ನ 137ನೇ ವರದಿಯಲ್ಲಿ ಶಿಫಾರಸು ಮಾಡಿದೆ.

"ಆಕ್ಸಿಜನ್ ಕೊರತೆಯಿಂದ ಉಂಟಾದ ಕೋವಿಡ್ ಸಾವುಗಳನ್ನು(Covid Death) ಕೇಂದ್ರ ಆರೋಗ್ಯ ಸಚಿವಾಲಯ (Central Health Ministry) ಕೂಲಂಕಷವಾಗಿ ಪರಿಶೀಲಿಸಿ ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮಕೈಗೊಳ್ಳಬೇಕು" ಎಂದು ಹೇಳಿದ ಸಮಿತಿಯ ವರದಿಯು ಆಕ್ಸಿಜನ್ ಕೊರತೆಯಿಂದ ಉಂಟಾದ ಸಾವುಗಳನ್ನು ಸಚಿವಾಲಯ ಅಲ್ಲಗಳೆದಿರುವುದು ದುರಾದೃಷ್ಟಕರ ಎಂದು ಬಣ್ಣಿಸಿದೆ.

ನಿಯಂತ್ರಣ ಕ್ರಮಗಳನ್ನು ಸಕಾಲದಲ್ಲಿ ಕೈಗೊಂಡಿದ್ದಲ್ಲಿ ಹಲವಾರು ಜೀವಗಳನ್ನು ಉಳಿಸಬಹುದಾಗಿತ್ತು, ಕೋವಿಡ್ ಪ್ರಕರಣಗಳ ದಿಢೀರ್ ಏರಿಕೆ ವೈದ್ಯಕೀಯ ವ್ಯವಸ್ಥೆ ಮೇಲೆ ಒತ್ತಡ ಹೇರಿರುವ ಜೊತೆಗೆ  ಕುಟುಂಬಗಳು ಆಕ್ಸಿಜನ್‍ಗಾಗಿ  ಅಂಗಲಾಚುವ ಪರಿಸ್ಥಿತಿ ಹಾಗೂ ಸಿಲಿಂಡರ್‍ಗಳಿಗಾಗಿ ಸರತಿ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು ಎಂದು ಸಮಿತಿ  ತನ್ನ ವರದಿಯಲ್ಲಿ ಹೇಳಿದೆ.

"ಸಂಭಾವ್ಯ ಆಕ್ಸಿಜನ್ ಕೊರತೆ ಕುರಿತು ಸಮಿತಿ ತನ್ನ 123ನೇ ವರದಿಯಲ್ಲಿಯೇ ಸರಕಾರಕ್ಕೆ ಎಚ್ಚರಿಕೆ ನೀಡಿತ್ತು. ಆದರೆ, ಸಚಿವಾಲಯವು 2020 ರಲ್ಲಿ ನೀಡಿದ ವರದಿಯಲ್ಲಿ ದೇಶದಲ್ಲಿ ಆಕ್ಸಿಜನ್ ಸಾಕಷ್ಟು ದಾಸ್ತಾನು ಇದೆ ಎಂದು ಹೇಳಿತ್ತು ಆದರೆ ಸರಕಾರದ ಹೇಳಿಕೆ ನಿಜವಾಗಿರಲಿಲ್ಲ ಎಂಬುದು ಎರಡನೇ ಅಲೆ ವೇಳೆ ಸಾಬೀತಾಗಿತ್ತು" ಎಂದು ಸಮಿತಿ ಹೇಳಿದೆ

"ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಹಲವು ಸಾವುಗಳು ಸಂಭವಿಸಿದ್ದರೂ ಸರಕಾರ ಅದನ್ನು ನಿರಾಕರಿಸಿರುವುದು ಅದಕ್ಕಿರುವ ಅನುಕಂಪದ ಕೊರತೆಯನ್ನು ತೋರಿಸುತ್ತದೆ" ಎಂದು ಸಮಿತಿ ಹೇಳಿದೆ.

ಆಕ್ಸಿಜನ್ ಕೊರತೆಯ ಹೊರತಾಗಿ ಎರಡನೇ ಕೋವಿಡ್ ಅಲೆ ವೇಳೆ  ಅತ್ಯಧಿಕ ಪ್ರಕರಣಗಳು, ಹೆಚ್ಚಿನ ಸಾವುಗಳು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಔಷಧಿಗಳ ಕೊರತೆ, ಆರೋಗ್ಯ ಸೇವೆಗಳಲ್ಲಿ ವ್ಯತ್ಯಯ, ಸಿಲಿಂಡರ್‍ಗಳು ಹಾಗೂ ಔಷಧಿಗಳ ಅಕ್ರಮ ದಾಸ್ತಾನು ಹಾಗೂ ಕಾಳಧನದಲ್ಲಿ ಮಾರಾಟ ಕೂಡ ಸಮಸ್ಯೆ ಸೃಷ್ಟಿಸಿದ್ದವು ಎಂದು ಸಮಿತಿ ತನ್ನ ವರದಿಯಲ್ಲಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X