ದಿ.ಆಸ್ಕರ್ ಫೆರ್ನಾಂಡೀಸ್‌ರ ಪ್ರಥಮ ಪುಣ್ಯತಿಥಿ; ಅಭಿಮಾನಿ ಬಳಗದಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಉಡುಪಿ, ಸೆ.13: ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಇಂದು ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯತಿಥಿಯನ್ನು ಅವರ ಅಭಿಮಾನಿಗಳು ಆಚರಿಸಿದರು.
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದವರು ಇಂದು ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಸ್ಪತ್ರೆ ಹಾಗೂ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ತಮ್ಮ ನೆಚ್ಚಿನ ನಾಯಕನ ಪ್ರಥಮ ಪುಣ್ಯತಿಥಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತಾನಾಡಿ, ಆಸ್ಕರ್ ಫೆರ್ನಾಂಡಿಸ್ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದಲ್ಲಿರುವ ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸದಾ ಆಸ್ಕರ್ ಫೆರ್ನಾಂಡಿಸ್ ಮೊದಲಾಗಿ ಸ್ಪಂದಿಸುತ್ತಿದ್ದರು. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಪುಣ್ಯತಿಥಿಗೆ ನಿಜವಾದ ಅರ್ಥವನ್ನು ಅವರ ಅಭಿಮಾನಿಗಳು ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಗೌರವ ಅಧ್ಯಕ್ಷ ರೊನಾಲ್ಡ್ ಮನೋಹರ ಕರ್ಕಡ, ಪ್ರಮುಖರಾದ ಮಂಜಿತ್ ನಾಗರಾಜ್, ಮಹಮ್ಮದ್ ಶೀಶ್, ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಅರ್ವಿನ್ ಫೆರ್ನಾಂಡಿಸ್, ನವೀನ್ ಶೆಟ್ಟಿ, ಹರೀಶ್ ಶೆಟ್ಟಿ, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಮಧುಸೂದನ ನಾಯಕ್ ಮೊದಲಾದವರು ಜೊತೆಗಿದ್ದರು.







