ವಿಕಲಚೇತನರಿಂದ ಅರ್ಜಿ ಆಹ್ವಾನ

ಉಡುಪಿ, ಸೆ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಫಲಾನುಭವಿ ಆಧಾರಿತ ಯೋಜನೆಗಳಾದ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಹಾಗೂ ವೈದ್ಯಕೀಯ ಪರಿಹಾರ ನಿಧಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುವಿಗಳಿಂದ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ https://sevasindhu.karnataka.gov.in/Sevasindhu/Department Services- ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810, 2574811ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





