Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‌ ವೈ, ಕುಟುಂಬದ ಸದಸ್ಯರು, ಸಚಿವ...

ಬಿಎಸ್‌ ವೈ, ಕುಟುಂಬದ ಸದಸ್ಯರು, ಸಚಿವ ಸೋಮಶೇಖರ್‌ ವಿರುದ್ಧ FIR ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Sept 2022 2:14 PM IST
share
ಬಿಎಸ್‌ ವೈ, ಕುಟುಂಬದ ಸದಸ್ಯರು, ಸಚಿವ ಸೋಮಶೇಖರ್‌ ವಿರುದ್ಧ FIR ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಸೂಚನೆ

ಬೆಂಗಳೂರು, ಸೆ.14: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ವಸತಿ ಯೋಜನೆ ಅನುಷ್ಠಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ಸಚಿವ ಎಸ್.ಟಿ.ಸೋಮಶೇಖರ್ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಆದೇಶ ಮಾಡಿದೆ. 

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಜಯಂತ್‌ಕುಮಾರ್ ಅವರಿದ್ದ ನ್ಯಾಯಪೀಠ, ತನಿಖೆ ನಡೆಸಿ, ನವೆಂಬರ್ 2ರೊಳಗೆ ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ. 

ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಅವರ ವಿರುದ್ಧ ದೂರಿನಲ್ಲಿ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.

ಪ್ರಕರಣವೇನು?: ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿ ಮತ್ತು ಕೆಲ ಶೆಲ್ ಕಂಪೆನಿಗಳಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿಗಳ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಟಿ.ಜೆ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ವಿಶೇಷ ತನಿಖಾ ತಂಡದಿಂದ(ಎಸ್‌ಐಟಿ) ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿದ್ದರು.

ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದ ಕಾರಣ ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ 2021ರ ಜುಲೈ 8 ರಂದು ದೂರನ್ನು ವಜಾಗೊಳಿಸಿತ್ತು. ಆದರೆ, ಹೈಕೋರ್ಟ್, ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಲಂಚ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸೆ.8ರಂದು ಹಸಿರು ನಿಶಾನೆ ತೋರಿತ್ತು. 

ಇದರಿಂದಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರೂ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 7,8,9,10 ಮತ್ತು 13, ಐಪಿಸಿ-1860ರ ಕಲಂ 383, 384, 415, 418, 420 ಹಾಗೂ ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 3 ಮತ್ತು 4ರ ಅನ್ವಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲಿದೆ.

ಇದನ್ನೂ ಓದಿ: ವಿಟ್ಲ: ಜಾಗದ ತಕರಾರು; ತಮ್ಮನಿಂದ ಅಣ್ಣನ ಕೊಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X