ಲೈಂಗಿಕ ಕಿರುಕುಳ ಪ್ರಕರಣ: ಸೆ.27 ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ, ಸೆ.14: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಂಧಿತರಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀಗೆ 2ನೇ ಹೆಚ್ಚುವರಿ ನ್ಯಾಯಾಧೀಶರ ನ್ಯಾಯಾಲಯವು ಸೆ.27ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ಸೆ.5ರಂದು ಮುರುಘಾಶ್ರೀಯನ್ನು ಪೊಕ್ಸೊ ಕಾಯ್ದೆ ಅಡಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬುಧವಾರ ಪೊಲೀಸರು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಸೆ.27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು.
ಇದನ್ನೂ ಓದಿ: ಬಿಎಸ್ ವೈ, ಕುಟುಂಬದ ಸದಸ್ಯರು, ಸಚಿವ ಸೋಮಶೇಖರ್ ವಿರುದ್ಧ FIR ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಸೂಚನೆ
Next Story





