ಬಂಟ್ವಾಳ: ಬಾವಿಗೆ ಬಿದ್ದ ಯುವತಿಯ ರಕ್ಷಣೆ

ಬಂಟ್ವಾಳ, ಸೆ.14: ಆಕಸ್ಮಿಕವಾಗಿ ಬಾವಿಗೆ ಬಿದ್ದು ನರಳಾಡುತ್ತಿದ್ದ ಯುವತಿಯೊಬ್ಬಳನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ತಾಲೂಕಿನ ಅಳಿಕೆ ಗ್ರಾಮದಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿನ ಸುಮಾರು 50ರಷ್ಟು ಅಡಿ ಆಳದ ಪಾಳು ಬಾವಿಗೆ ಯುವತಿ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದಾರೆ.
ಬಾವಿಯೊಳಗೆ ಬಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಯುವತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಬಳಿಕ ಯುವತಿಯನ್ನು ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತೆಗೆ ದಾಖಲಿಸಿದ್ದಾರೆ.
ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡ ಈ ರಕ್ಷಣಾ ಕಾರ್ಯ ನಡೆಸಿದೆ.
Next Story