ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ
ಬೆಂಗಳೂರು, ಸೆ.14: ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು. ಈ ಸಂಬಂಧ ಕರ್ನಾಟಕ ಸರಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಇದೀಗ ಅನುಮೋದಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಬಿಎಸ್ವೈ ಅಭಿನಂದನೆ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ. ಆ ಮೂಲಕ ಸಮುದಾಯಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದ್ದು ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಶ್ರೀ @narendramodi ಜೀ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. #CabinetDecisions pic.twitter.com/GWnvZw7E8l
— Pralhad Joshi (@JoshiPralhad) September 14, 2022
ಇಂದು ಪ್ರಧಾನಿ ಶ್ರೀ @narendramodi ರವರ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ. ಆಮೂಲಕ ಸಮುದಾಯಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
— B.S.Yediyurappa (@BSYBJP) September 14, 2022