ಕಬ್ಬಿನಾಲೆ ನದಿಯಲ್ಲಿ ಮುಳುಗಿ ಯುವಕ ಮೃತ್ಯು

ಪವನ್
ಉಡುಪಿ, ಸೆ.14: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.
ಮೃತರನ್ನು ಮುನಿಯಾಲು ನಿವಾಸಿ ಪವನ್ (25) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನ ಮಾಡುತ್ತಿದ್ದು, ಈ ವೇಳೆ ನೀರಿನ ಸೆಳೆತಕ್ಕೆ ಪವನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟರೆನ್ನಲಾಗಿದೆ. ಇವರ ಮೃತದೇಹವು ಸುಮಾರು 200 ಮೀ ದೂರದಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





