ಮಂಗಳೂರು ಮನಪಾ ಮುಂದೆ ಧರಣಿ

ಮಂಗಳೂರು, ಸೆ.14: ರಾಜ್ಯ ಸರಕಾರಿ ನೌಕರರು ಮತ್ತವರ ಕುಟುಂಬದ ಅವಲಂಬಿತ ಸದಸ್ಯರಿಗೆ ಜಾರಿಯಾದ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು, ಹಾಗೂ ಪೌರಕಾರ್ಮಿಕರಿಗೂ ಜಾರಿಗೊಳಿಸುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆಯ ಮುಂದೆ ಎಸ್.ಕೆ.ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಂಗಳೂರು ಇದರ ಸದಸ್ಯರು ಬುಧವಾರ ಧರಣಿ ನಡೆಸಿದರು.
ಮಹಾನಗರ ಪಾಲಿಕೆಯ ನೌಕರರ ಸಂಘದ ಅಧ್ಯಕ್ಷ ಬಾಲು, ಪ್ರಧಾನ ಕಾರ್ಯದರ್ಶಿ ಸಿ.ಭಾಸ್ಕರ್, ನಿಕಟಪೂರ್ವ ಅಧ್ಯಕ್ಷ ಶಿವರಾಜ್ ಪಿ.ಬಿ., ಕಾರ್ಮಿಕ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ. ಆನಂದ್ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
Next Story