Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ,...

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ, ದಲಿತರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇವೆ: ದಿನೇಶ್ ಅಮೀನ್‌ ಮಟ್ಟು

ಸಂವಿಧಾನ ವಿರೋಧಿ ಶಕ್ತಿಗಳ ನಡೆ ಖಂಡಿಸಿ ಹಾಸನದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Sept 2022 6:41 PM IST
share
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ, ದಲಿತರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇವೆ: ದಿನೇಶ್ ಅಮೀನ್‌ ಮಟ್ಟು

ಹಾಸನ: ಜಿಲ್ಲೆಯಲ್ಲಿ ದಲಿತ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಹಾಗೂ ಸಂವಿಧಾನ ವಿರೋಧಿ ಶಕ್ತಿಗಳ ನಡೆ ಖಂಡಿಸಿ ನಗರದಲ್ಲಿಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿದವು.

ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಮೆರವಣಿಗೆ ಎನ್.ಆರ್.ವೃತ್ತದ ಮೂಲಕ ಜಿಲ್ಲಾಸ್ಪತ್ರೆ ಮುಂಭಾಗ ಹಾಕಿದ್ದ ವೇದಿಕೆಗೆ ಆಗಮಿಸಿತು. ಈ ವೇಳೆ ದಲಿತರಿಗೆ ರಕ್ಷಣೆ ನೀಡದ, ತೊಂದರೆ, ದಬ್ಬಾಳಿಕೆ ಮಾಡುತ್ತಿರುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ದಿನೇಶ್  ಅಮೀನ್‌ ಮಟ್ಟು, 'ದೇಶದಲ್ಲಿ ಸಂವಿಧಾನ ಮತ್ತು ಅಟ್ರಾಸಿಟಿ ಕಾಯಿದೆ ದುರ್ಬಲ ಮಾಡಲು ಅನೇಕ ಪ್ರಯತ್ನ ನಡೆಯುತ್ತಲೇ ಇವೆ' ಎಂದು ಕಳವಳ ವ್ಯಕ್ತಪಡಿಸಿದರು.

ನಾವೆಲ್ಲರೂ ಇಂದು ದೈರ್ಯದಿಂದ ಬದುಕಲು ಇರುವ ಒಂದೇ ಒಂದು ಆಯುಧ ಎಂದರೆ ಸಂವಿಧಾನ. ಅದನ್ನೇ ಬುಡಮೇಲು ಮಾಡಲು ಮುಂದಾಗಿರುವ ಸರಕಾರಗಳ ನಡೆ ಬಗ್ಗೆ ಜನರು ಯೋಚಿಸಬೇಕಿದೆ ಎಂದರು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ, ದಲಿತರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ನಡೆಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

'ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯುರೋ ಪ್ರಕಾರ ದೇಶದಲ್ಲಿ ಪ್ರತಿ 16 ನಿಮಿಷಕ್ಕೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಪ್ರತಿದಿನ 13 ದಲಿತರ ಕೊಲ, 4 ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗುತ್ತಿವೆ. ಎಂಬುದು ಅಂಕಿ ಅಂಶಗಳನ್ನು ಕೇಂದ್ರ ಸರ್ಕಾರವೇ ಬಹಿರಂಗಪಡಿಸಿದೆ' ಎಂದು ವಿವರಿಸಿದರು. 

'ಇಂದಿಗೂ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ ನಡೆದಿರುವ ಸಾವಿರಾರು ದೌರ್ಜನ್ಯ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಸಕಲೇಶಪುರದಲ್ಲಿ ನಡೆದ ಘಟನೆ ನೋಡಿದರೆ ಇತಿಹಾಸದ ಚಕ್ರದ ಹಿಂದೆ ಹೋಗಬೇಕಿತ್ತು, ಆದರೆ ವಿರೋಧಿ ದಿಕ್ಕಿಗೆ ಹೋಗುತ್ತಿದೆ' ಎಂದು ಆತಂಕ ಹೊರ ಹಾಕಿದರು.

'ದೇಶದಲ್ಲಿ ದಲಿತರು, ಹಿಂದುಳಿದ ಹಾಗೂ ಮುಸ್ಲಿಮರನ್ನು ಒಡೆಯುವ ಪ್ರಯತ್ನವಾಗುತ್ತಿದೆ. ಹಿಂದುತ್ವದ ಮೇಲೆ ರಾಜಕಾರಣ ಮಾಡುವವರಿಗೆ ದೇವರ ಮೇಲೆ ಎಳ್ಳಷ್ಟು ಭಕ್ತಿ ಇಲ್ಲದಂತಾಗಿದ್ದು, ರಾಮನ ಹೆಸರಿನಲ್ಲಿ ಪೋಸ್ಟ‌ ಗಳು ಬರೀ ಚುನಾವಣೆ ಗಿಮಿಕ್ ಆಗಿದೆ ಎಂದು ಟೀಕಿಸಿದರು. ಇಂದು ಅಂಬೇಡ್ಕರ್ ಚಿಂತನೆಗಳು ಮಾತ್ರ ಬೀದಿಗೆ ಬರಬೇಕು. ಚಳುವಳಿ ಮೂಲಕ ಸರ್ಕಾರಗಳನ್ನು ಬದಲಾವಣೆ ಮಾಡಬಹುದು ಅಂತಹ ಕಾರ್ಯಕ್ಕೆ ಜನರು ಮುಂದಾಗುವ ಮೂಲಕ ಉತ್ತಮ ಆಡಳಿತದ ಆಯ್ಕೆಗೆ ಸಹಕರಿಸಬೇಕು' ಎಂದು ಕರೆ ನೀಡಿದರು.

ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಧರ್ಮಶ್ ಪ್ರಾಸ್ತಾವಿಕವಾಗಿ ಮಾತನಾಡಿ, 'ಕೋಮುವಾದಿಸಂಘಟನೆಗಳನ್ನು ಹಿಮ್ಮಟಿಸಬೇಕಿದೆ, ದೇಶದ ಸಂವಿಧಾನ ಅಪ್ರಸ್ತುತಗೊಳಿಸುವ, ದುರ್ಬಲ ಮಾಡುವ ಪ್ರಯತ್ನ ಸತತವಾಗಿ ನಡೆಯುತ್ತಿದ್ದು, ಇದರ ವಿರುದ್ದ ದಲಿತ ಹಾಗೂ ಹಿಂದುಳಿದ ವರ್ಗದವರು ಸಂಘಟಿತರಾಗಿ ಹೋರಾಡಬೇಕಿದೆ' ಎಂದರು.

ಸಮಾವೇಶದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ, ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ, ಬಾಗೂರು ಮಂಜೆಗೌಡ, ಶೇಶೆಗೌಡ, ಸಲೀಂ ಕೊಲ್ಲಹಳ್ಳಿ, ಸಭಿಕರಾಗಿ ಬಾಗವಹಿಸಿದ್ದರು.

ಪ್ರತಿಭಟನೆ ಹಾಗೂ ಸಭೆಯಲ್ಲಿ ದಲಿತ ಮುಖಂಡರಾದ ಶ್ರೀಧರ್ ಕಲಿವೀರ್, ಹೆಚ್.ಕೆ.ಸಂದೇಶ್, ಆರ್‌ಪಿಐ ಸತೀಶ್, ಹೆತ್ತೂರು. ಅಬ್ದುಲ್ ಸಮದ್ , ಮುಬ್ಬಶಿರ್ ಅಹಮದ್, ಮಲ್ನಾಡ್ ಮೆಹಬೂಬ್, ನಾಗರಾಜ್,ಅಂತಾರಾಷ್ಟ್ರೀಯ ಕಲಾವಿದ ಕೆ.ಟಿ.ಶಿವಪ್ರಸಾದ್, ಎಸ್.ಎನ್.ಮಲ್ಲಪ್ಪ, ರಾಜಶೇಖರ್, ಮಲ್ಲೇಶ್ ಅಂಬುಗ, ವಿಜಯಕುಮಾರ್, ಗಣೇಶ್ ವೇಲಾಪುರಿ, ಈರೇಶ್ ಹಿರೇಹಳ್ಳಿ, ಕೆರಗೋಡು ಸೋಮಶೇಖರ್, ಗಂಗಾಧರ್ ಬಹುಜನ್, ಪೃಥ್ವಿ, ಮರಿಜೋಸೆಫ್, ಕೃಷ್ಣದಾಸ್, ಶಂಕರ್ ರಾಜ್,  ಎಸ್ ಎನ್ ಮಲ್ಲಪ್ಪ,  ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಹೆಚ್.ಆರ್.ನವೀನ್ ಕುಮಾರ್ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X