ಸೆ.18: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಸಾಂದರ್ಭಿಕ ಚಿತ್ರ
ಮಂಗಳೂರು, ಸೆ.15: ದ.ಕ. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಸೆ.18ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 9ಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕ್ರೀಡಾಕೂಟ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡೆ, ರೇಷ್ಮೆ ಇಲಾಖೆಯ ಸಚಿವ ನಾರಾಯಣಗೌಡ ಕೆ.ಸಿ. ದ್ವಜಾರೋಹಣ ನೆರವೇರಿಸುವರು. ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.
ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭೆಯ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story