ಗಾಂಜಾ ಸೇವನೆ; ಆರೋಪಿ ಸೆರೆ

ಮಂಗಳೂರು, ಸೆ.15: ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದ ಮೇಲೆ ಕಸಬಾ ಬೆಂಗರೆ ನಿವಾಸಿ ಇಸ್ಮಾಯಿಲ್ ಹುಸೈನ್ ಫರಾನ್ (33) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬುಧವಾರ ನಗರದ ಗೂಡ್ಸ್‌ಶೆಡ್ ರಸ್ತೆಯ ರೈಲ್ವೆ ಟ್ರಾಕ್ ಬಳಿಯ ಅರಣ್ಯ ಇಲಾಖೆಯ ಕಚೇರಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿಯು ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಳಿಕ ದಾಳಿ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





