Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪ್ರಾಪ್ತ ವಯಸ್ಸಿನ ಬಾಲಕಿ ಅಪಹರಣ,...

ಅಪ್ರಾಪ್ತ ವಯಸ್ಸಿನ ಬಾಲಕಿ ಅಪಹರಣ, ಅತ್ಯಾಚಾರ; ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ16 Sept 2022 7:55 AM IST
share
ಅಪ್ರಾಪ್ತ ವಯಸ್ಸಿನ ಬಾಲಕಿ ಅಪಹರಣ, ಅತ್ಯಾಚಾರ; ಇಬ್ಬರ ಬಂಧನ

ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ ಇಬ್ಬರು ಆಕೆಯನ್ನು ಎರಡು ಹೋಟೆಲ್‍ಗಳಿಗೆ ಕರೆದೊಯ್ದು ಸತತ ಎರಡು ದಿನಗಳ ಕಾಲ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಬಾಲಕಿಯನ್ನು ಸುರ್ಜಾನಾ ಇನ್ ಹಾಗೂ ಥ್ರೀ ಕ್ಯಾಸೆಲ್ಸ್ ಎಂಬ ಹೋಟೆಲ್‍ಗಳಿಗೆ ಕರೆದೊಯ್ದಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಕಂಡುಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ ತಂಗಿದ್ದ ಎರಡೂ ಹೋಟೆಲ್‍ಗಳಿಂದ ವಿಧಿವಿಜ್ಞಾನ ಮಾದರಿಗಳನ್ನು ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆರೋಪಿಗಳಾದ ನಯೀಮತ್ (26) ಮತ್ತು ರಬಿಷ್ (20) ಎಂಬವರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಪೋಕ್ಸೊ ಕಾಯ್ದೆಯಡಿಯೂ ಎಫ್‍ಐಆರ್ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.

ಸೋಮವಾರ ಸಂಜೆ ಔಷಧಿ ತರಲು ಮೆಡಿಕಲ್‍ಗೆ ಹೋಗಿದ್ದ 14 ವರ್ಷ ವಯಸ್ಸಿನ ಬಾಲಕಿಯನ್ನು ಅಪಹರಿಸಲಾಗಿದೆ ಎಂದು ಆಕೆಯ ತಾಯಿ ಮಂಗಳವಾರ ದೂರು ನೀಡಿದ್ದರು. ಕಾರೊಂದರಲ್ಲಿ ಆಕೆಯನ್ನು ಕರೆದೊಯ್ಯಲಾಗಿದೆ ಎಂಬ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ಅಪಹರಣ ಪ್ರಕರಣ ದಾಖಲಿಸಲಾಗಿತ್ತು.

ಗುರುವಾರ ಬಾಲಕಿಯ ಇರುವಿಕೆ ಬಗ್ಗೆ ಸ್ಪಷ್ಟ ಸುಳಿವು ಪಡೆದ ಪೊಲೀಸರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಇಬ್ಬರು ಆರೋಪಿಗಳನ್ನು ಬಂಧಿಸಿ ಬಾಲಕಿಯನ್ನು ಕೌನ್ಸಿಲಿಂಗ್, ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.

ಪುತ್ರಿಗೆ ಮಾದಕ ವಸ್ತು ನೀಡಿ ಲೈಂಗಿಕ ಹಲ್ಲೆ ನಡೆಸಲಾಗಿದೆ ಎನ್ನುವುದು ತಾಯಿಯ ಆರೋಪ. ಅತ್ಯಾಚಾರಕ್ಕೆ ಮುನ್ನ ಮಗಳಿಗೆ ಡ್ರಗ್ಸ್ ಚುಚ್ಚು ಮದ್ದು ನೀಡುವ ಜತೆಗೆ ಮದ್ಯವನ್ನೂ ಕುಡಿಸಲಾಗಿದೆ ಎಂದು ಆಪಾದಿಸಿದ್ದಾರೆ.

ಒಬ್ಬ ಆರೋಪಿ ಹೈಸ್ಕೂಲ್‍ನಿಂದ ಓದು ಬಿಟ್ಟಿದ್ದು, ಮತ್ತೊಬ್ಬ ವಿದೇಶದಲ್ಲಿದ್ದು, ಆತ ಮಾರ್ಚ್‍ನಲ್ಲಿ ವಾಪಸ್ಸಾಗಿದ್ದ. ಬಾಲಕಿ ಕೂಡಾ ಶಾಲಾ ಶಿಕ್ಷಣವನ್ನು ಅರ್ಧದಲ್ಲಿ ಬಿಟ್ಟಿದ್ದು, ತನ್ನದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ರಬಿಷ್‍ನ ಪರಿಚಯ ಇತ್ತು ಎಂದು ndtv.com ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X