Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು...

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 Sept 2022 8:02 AM IST
share
ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬಸವರಾಜ  ಬೊಮ್ಮಾಯಿ ಘೋಷಣೆ

ಬೆಂಗಳೂರು : ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿ ಶೀಘ್ರವಾಗಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಮುದಾಯ ಭವನಕ್ಕೆ ಎರಡು ಕಂತುಗಳಲ್ಲಿ 5 ಕೋಟಿ‌ ರೂ ಒದಗಿಸಿ,  4 ನಾರಾಯಣ ಗುರುಗಳ ವಸತಿ ಶಾಲೆಗೆ 30 ರಿಂದ 40 ಕೋಟಿ ರೂ. ಒದಗಿಸಲಾಗುವುದು. ಸಮಾಜದ ಬಡ ಮಕ್ಕಳಿಗೆ ನೀಡುವ ಕಾರ್ಯ ಇದೇ ವರ್ಷ ಆರಂಭವಾಗುತ್ತದೆ  ಎಂದು ಹೇಳಿದರು.

ನಾರಾಯಣ ಗುರುಗಳ ವಿಚಾರಧಾರೆ ಸರ್ವ ಕಾಲಕ್ಕೂ ಅವಶ್ಯಕ. ಅತ್ಯಂತ ಮಾನವೀಯ ತಳಹದಿಯ ಮೇಲೆ ಬದುಕನ್ನು ಯಾವ ರೀತಿ ನಡೆಸಬೇಕು ಎನ್ನುವುದನ್ನು ಮಾರ್ಮಿಕವಾಗಿ ಬದುಕಿ ತೋರಿಸಿದವರು. ಈ ದೇಶ-ವಿಶ್ವದಲ್ಲಿ ‌ನಾವು ಹಲವಾರು ಧರ್ಮ,‌ ಜಾತಿಗಳನ್ನು ನೋಡಿದ್ದೇವೆ.‌ ಎಲ್ಲ ಧರ್ಮ ಜಾತಿಗಳು ಮಾನವೀಯ ಗುಣಗಳನ್ನು ಒಳಗೊಂಡಿವೆ. ನಮ್ಮಲ್ಲಿ ಸುಖ, ಶಾಂತಿ, ನೆಮ್ಮದಿ, ವಿಶ್ವಾಸ, ದಯೆಯಿಂದ ತುಂಬಿರಬೇಕು ಎನ್ನುವುದು ಮಾನವೀಯ ಗುಣ. ಮನುಷ್ಯ ಮತ್ತು ಮಾನವನ ನಡುವೆ ವ್ಯತ್ಯಾಸವಿದೆ. ಕೆಲವೇ ಕೆಲವರು ಮಾನವರಾಗಿ, ಇನ್ನೂ ಕೆಲವರು ಅತ್ಯಂತ ಯುಗಪುರುಷರಾಗಿ ದೇವ ಮಾನವರಾಗುತ್ತಾರೆ. ಅಂತಹ ದೇವ ಮಾನವರಾಗಿರುವವರು ನಾರಾಯಣ ಗುರುಗಳು ಎಂದು ಸಿಎಂ  ತಿಳಿಸಿದರು.

ಸರ್ವಕಾಲಿಕ ಸತ್ಯ ಮಾರ್ಗದಲ್ಲಿ ನಡೆಯುವವನೇ ದೇವ ಮಾನವ. ಅವರ ಬದುಕಿನ ಸಾವಿರಾರು ಹೆಜ್ಜೆಗಳಲ್ಲಿ ನಾವು ಎರಡು ಹೆಜ್ಜೆ ನಡೆದರೆ ನಮ್ಮ ಜೀವನ ಸಾರ್ಥಕ‌ ಆಗುತ್ತದೆ. ಬದಲಾವಣೆ ಜಗದ ನಿಯಮ. ಆದರೆ ಬದಲಾವಣೆ ಆರಂಭದಲ್ಲಿಯೇ ಆಗುವುದಿಲ್ಲ.  ಆಚಾರ ವಿಚಾರದಲ್ಲಿ ಬದಲಾವಣೆ ಸುಲಭವಾಗಿ ಆಗುವುದಿಲ್ಲ. ಅದಕ್ಕೆ ಗುರುವಿನ ಅವಶ್ಯಕತೆಯಿದೆ. ಗುರುವಿನ ಮಾರ್ಗದರ್ಶನ, ಸ್ಪೂರ್ತಿಯಿಂದ ನಾವು ನಮ್ಮ ಬದುಕಿನ ಗುರಿಯನ್ನು ಮುಟ್ಟಬಹುದಾಗಿದೆ. ನಮ್ಮ ದೇಶಕ್ಕೆ‌ ಹಿಂದಿನಗಿಂತಲೂ ಈಗ ನಾರಾಯಣ ಗುರುಗಳ ಅವಶ್ಯಕತೆ ಹೆಚ್ಚಿದೆ ಎಂದು  ತಿಳಿಸಿದರು.

ಸಮಾಜದಲ್ಲಿ ಜಾಗೃತಿಯ ಜೊತೆಗೆ ಒಗ್ಗಟ್ಟು ಬಹಳ ಮುಖ್ಯ. ಬೇರೆ ಬೇರೆ 26 ಕಸುಬುಗಳಲ್ಲಿ ಕೆಲಸ ಮಾಡಿಕೊಂಡರು, ಅವರನ್ನು ಒಗ್ಗೂಡಿಸಿದ್ದು ನಾರಾಯಣ ಗುರುಗಳು. ಇದನ್ನು ಕಾಪಾಡಿಕೊಂಡು ಹೋಗಬೇಕು. ಪ್ರಜಾಪ್ರಭುತ್ವದಲ್ಲಿ ಸಂಘಟಿತವಾದ ಧ್ವನಿಗೆ ಬಹಳ ಬೆಲೆಯಿದೆ. ಈ ವ್ಯವಸ್ಥೆಯಲ್ಲಿ ನಮ್ಮ ಬದುಕು, ನಮ್ಮ ಮಕ್ಕಳ ಭವಿಷ್ಯ ಚೆನ್ನಾಗಿ ಆಗಬೇಕಾದರೆ, ಈ ಸಮಾಜ ಸಂಘಟಿತವಾಗಿ ಎದ್ದು ನಿಲ್ಲಬೇಕು ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X