Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜನಸೇವಾ ಟ್ರಸ್ಟ್ ಗೆ 25 ಎಕರೆ ಗೋಮಾಳ:...

ಜನಸೇವಾ ಟ್ರಸ್ಟ್ ಗೆ 25 ಎಕರೆ ಗೋಮಾಳ: ಸರಕಾರದ ಬೊಕ್ಕಸಕ್ಕೆ 20 ಕೋ.ರೂ. ನಷ್ಟ

ಜಿ.ಮಹಾಂತೇಶ್ಜಿ.ಮಹಾಂತೇಶ್16 Sept 2022 8:58 AM IST
share
ಜನಸೇವಾ ಟ್ರಸ್ಟ್ ಗೆ 25 ಎಕರೆ ಗೋಮಾಳ: ಸರಕಾರದ ಬೊಕ್ಕಸಕ್ಕೆ 20 ಕೋ.ರೂ. ನಷ್ಟ

ಬೆಂಗಳೂರು: ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿಗೆ ಸರಕಾರದ ಮಾರ್ಗಸೂಚಿ ದರ ಪ್ರಕಾರ 27 ಕೋಟಿ ರೂ. ಮಂಜೂರು ಮಾಡದೆ ಕೇವಲ 7.68 ಕೋಟಿ ರೂ. ಮಂಜೂರು ಮಾಡಿ ಆದೇಶ ಹೊರಡಿಸಿರುವ ಸರಕಾರವು ಬೊಕ್ಕಸಕ್ಕೆ ಅಂದಾಜು 20 ಕೋಟಿ ರೂ. ನಷ್ಟವನ್ನು ಹೊರಿಸಿದೆ.

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೇ ನಂಬರ್ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಜನಸೇವಾ ಟ್ರಸ್ಟ್‌ಗೆ ಸಚಿವ ಸಂಪುಟವು ಮಂಜೂರು ಮಾಡಿತ್ತು. ಆದರೆ ಇದರಲ್ಲಿ 10 ಎಕರೆಯನ್ನು ಕಡಿತಗೊಳಿಸಿ 25 ಎಕರೆ ಮಂಜೂರು ಮಾಡಿ 2022ರ ಸೆ.13ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಕುರುಬರಹಳ್ಳಿಯಲ್ಲಿ ಪ್ರತೀ ಎಕರೆಗೆ ಮಾರುಕಟ್ಟೆ ಬೆಲೆಯು 2 ಕೋಟಿ ರೂ. ಇದೆ. ಇದರ ಪ್ರಕಾರ 25 ಎಕರೆಗೆ 50 ಕೋಟಿ ರೂ. ಬೆಲೆ ಇದೆ. ಸರಕಾರವು ಆದೇಶದಲ್ಲಿ ನಮೂದಿಸಿರುವ ಮಾರ್ಗಸೂಚಿ ದರದ ಪ್ರಕಾರ ಪ್ರತೀ ಎಕರೆಗೆ 1.20 ಕೋಟಿ ರೂ. ಇದೆ. ಆದರೆ ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿ ಮೌಲ್ಯದ ಶೇ.25ರಷ್ಟು ದರದಲ್ಲಿ ಮಂಜೂರು ಮಾಡುವ ಮೂಲಕ ಬೊಕ್ಕಸಕ್ಕೆ 20 ಕೋಟಿ ರೂ. ನಷ್ಟಕ್ಕೆ ದಾರಿಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಮಾರ್ಗಸೂಚಿ ದರದ ಪ್ರಕಾರ ಎಕರೆಗೆ 1.20 ಕೋಟಿ ರೂ.ಯಂತೆ 25 ಎಕರೆಗೆ 27 ಕೋಟಿ ರೂ. ಆಗಲಿದೆ. ಆದರೀಗ ಈ ಮಾರ್ಗಸೂಚಿ ಮೌಲ್ಯದ ಶೇ.25ರಷ್ಟು ದರದ ಪ್ರಕಾರ 25 ಎಕರೆಗೆ ಕೇವಲ 7.68 ಕೋಟಿ ರೂ.  ಮಂಜೂರು ಮಾಡಿದೆ. ಇದು ಸರಕಾರದ ಬೊಕ್ಕಸಕ್ಕೆ ಅಂದಾಜು 20 ಕೋಟಿ ರೂ. ನಷ್ಟದ ಹೊರೆಯನ್ನು ಹೊರಿಸಿದಂತಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೇ ನಂ 89ರಲ್ಲಿ ಲಭ್ಯವಿರುವ ಜಮೀನನ್ನು ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಸಿ. ಬಲರಾಮ್ ಅವರು ಈ ಭೂಮಿಯು ಅತಿ ಅಮೂಲ್ಯವಾದ ಭೂಮಿಯಾಗಿರುವುದರಿಂದ ಈ ಸಂಸ್ಥೆಗೆ ನೀಡುವುದು ಸರಿಯಲ್ಲ. ಆದ್ದರಿಂದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿಸಲು ನಿರ್ದೇಶಿತನಾಗಿದ್ದೇನೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರದಲ್ಲಿ ತಿಳಿಸಿದ್ದರು.

ಅಲ್ಲದೆ, ಅಮೂಲ್ಯವಾದ ಜಮೀನನ್ನು ಮಂಜೂರು ಮಾಡುವ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರು ಪ್ರಾದೇಶಿಕ ಆಯುಕ್ತರ ಮೂಲಕ ಪ್ರಸ್ತಾವನೆ ಸಲ್ಲಿಸಿರಲಿಲ್ಲ. ಬದಲಿಗೆ ನೇರವಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್ವಸತಿ ಉದ್ದೇಶವೂ ಸೇರಿದಂತೆ ಇನ್ನಿತರ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನು ಹಂಚಿಕೆ ಸಂಬಂಧದ ಪ್ರಸ್ತಾವನೆಯನ್ನು ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಸಿ. ಬಲರಾಮ್ ಅವರು ತಿರಸ್ಕರಿಸಿದ್ದರು. ಈ ಸಂಬಂಧ 2022ರ ಮೇ 4ರಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗೆ ಪತ್ರವನ್ನೂ ಬರೆದಿದ್ದರು.

ಜನಸೇವಾ ಟ್ರಸ್ಟ್‌ಗೆ ಕುರುಬರಹಳ್ಳಿಯಲ್ಲಿರುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಲು ಹೋಬಳಿಯ ಮೂರು ಗ್ರಾಮಗಳ ಗ್ರಾಮಸ್ಥರು ವಿರೋಧಿಸಿ ತಕರಾರು ಎತ್ತಿದ್ದರು. ಅಲ್ಲದೆ, ಸುಮಾರು ಒಂದು ಸಾವಿರ ಜಾನುವಾರುಗಳನ್ನು ಮೇಯಿಸಲು ಈ ಜಮೀನು ಅತ್ಯವಶ್ಯಕವಾಗಿತ್ತು. ಹೀಗಾಗಿ ಯಾವುದೇ ಖಾಸಗಿ ಸಂಘ, ಸಂಸ್ಥೆ, ಟ್ರಸ್ಟ್ ಗಳಿಗೆ ಜಮೀನು ಮಂಜೂರು ಮಾಡಬಾರದು ಎಂದು ಗ್ರಾಮಸ್ಥರು ಸರಕಾರಕ್ಕೆ ಕೋರಿಕೆ ಸಲ್ಲಿಸಿದ್ದರು.

ಜನಸೇವಾ ಟ್ರಸ್ಟ್ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಮುನ್ನವೇ ಇದೇ ಗೋಮಾಳದಲ್ಲಿ ಜಮೀನು ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದ ಖಾಸಗಿ ಸಂಘವೊಂದರಿಂದ ಕಂದಾಯ ಇಲಾಖೆಯ ತಹಶೀಲ್ದಾರ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇರಿಸಿದ್ದರು. ಇದು ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರ ಗಮನದಲ್ಲೂ ಇತ್ತು.

ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿರುವ ಗೋಮಾಳ ಜಮೀನಿನಲ್ಲಿ ಗೋ ಶಾಲೆ ತೆರೆಯಲು ಹಲವು ಸಂಘ ಸಂಸ್ಥೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಸ್ಥಳೀಯ ತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಸಂಘ ಪರಿವಾರ ಹಿನ್ನೆಲೆಯ ಜನಸೇವಾ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು.

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೇ ನಂಬರ್ 89ರಲ್ಲಿನ ಒಟ್ಟು ಗೋಮಾಳ ಜಮೀನಿನಲ್ಲಿ 24 ಎಕರೆ ಮಂಜೂರಿಗೆ ಅರ್ಜಿ ಸಲ್ಲಿಸಿದ್ದ ಜನಸೇವಾ ಟ್ರಸ್ಟ್‌ನ ನಿರ್ಮಲ್ ಕುಮಾರ್ ಅವರು ಇದೇ ಟ್ರಸ್ಟ್‌ನ ಮತ್ತೊಂದು ಅಂಗ ಸಂಸ್ಥೆಯಾಗಿರುವ ಜನಸೇವಾ ವಿಶ್ವಸ್ಥ ಮಂಡಳಿಯ ಪರವಾಗಿಯೂ 35.33 ಎಕರೆ ಜಮೀನು ಮಂಜೂರಾತಿಗಾಗಿ ಮರು ಮನವಿ ಸಲ್ಲಿಸಿದ್ದರು.

ಜನಸೇವಾ ಟ್ರಸ್ಟ್ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರೂ. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿಯೂ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಇದೇ ಟ್ರಸ್ಟ್‌ಗೆ ರಾಜ್ಯ ಬಿಜೆಪಿ ಸರಕಾರವು ಮಂಜೂರು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X