ಮರಳು ತೆರವು: ದಾಖಲೆ ಸಲ್ಲಿಕೆ ಅವಧಿ ಸ್ತರಣೆ

ಸಾಂದರ್ಭಿಕ ಚಿತ್ರ
ಉಡುಪಿ, ಸೆ.16: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಟೆಂಡರ್ ಕಂ ಹರಾಜು ಮೂಲಕ ಮಾನವ ಶ್ರಮದಿಂದ ಮರಳು ಬ್ಲಾಕ್ಗಳನ್ನು ವಿಲೇವಾರಿ ಮಾಡಲು ಜಿಲ್ಲೆಯಲ್ಲಿ ಒಂದು ವರ್ಷದಿಂದ ವಾಸ್ತವ್ಯ ಹೊಂದಿರುವ ಬಗ್ಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ವಾಸ ದೃಢೀಕರಣ ಪತ್ರ ಹಾಗೂ ಇತರೆ ಪೂರಕ ದಾಖಲೆಗಳನ್ನು ಹಿರಿಯ ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಇವರ ಉಡುಪಿ ಕಚೇರಿಗೆ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 20ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂ.: 0820-2572333ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





