ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ನಿಧನ

ಕೆ. ಸತ್ಯನಾರಾಯಣ
ಬೆಂಗಳೂರು, ಸೆ.16: ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ಶುಕ್ರವಾರ ಮುಂಜಾನೆ ವಿಧಿವಶರಾದರು. ಅವರಿಗೆ 73 ವರ್ಷ ವಯಸ್ಸಾಗಿದ್ದು, ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಂತ್ಯ ಸಂಸ್ಕಾರವು ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ.
ಮೃತರಿಗೆ ಪತ್ನಿ ಮತ್ತು ಓರ್ವ ಪುತ್ರಿ ಇದ್ದಾರೆ. ಅವರ ಪುತ್ರಿ ಮತ್ತು ಅಳಿಯ ಆಸ್ಟ್ರೇಲಿಯದಲ್ಲಿದ್ದು ಶನಿವಾರ ಸಂಜೆ ನಗರಕ್ಕೆ ಆಗಮಿಸಲಿದ್ದಾರೆ.
ಅವರು ಪ್ರತಿಷ್ಠಿತ ಕನ್ನಡ ಪತ್ರಿಕೆಗಳಲ್ಲಿ ಕರಡುಪಠಕರಾಗಿ, ಸಹ ಸಂಪಾದಕರಾಗಿ, ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.
Next Story





